ಮೈಸೂರು: ‘ನಾನು ಪೊಲೀಸ್ ಕಮೀಷನರ್ ಆಗಿರುವಾಗ, ಆ ಸ್ಥಾನಕ್ಕೆ ಹಿರಿಯ ಅಧಿಕಾರಿಗಳಿದ್ದರೂ, ತುಂಬಾ ಕಿರಿಯ ಬ್ಯಾಚ್‌ನ ಅಧಿಕಾರಿಯಾಗಿದ್ದ ಅಮೃತ್ ಪಾಲ್ ಅವರನ್ನು ನೇಮಿಸುವ ಪ್ರಯತ್ನ ನಡೆದಿತ್ತು. ಅಚ್ಚರಿ ಜೊತೆಗೆ ಅನುಮಾನವನ್ನೂ ಮೂಡಿಸಿತ್ತು’ ಎಂದು ಆಮ್ ಆದ್ಮಿ ಪಕ್ಷದ ಮುಖಂಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಪಾಲ್ ಅವರು ರಾಜಕೀಯ ಒತ್ತಡಕ್ಕೆ ಒಳಗಾಗಿರುವ ಸಾಧ್ಯತೆ ಇದೆ, ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ ದೇಶದಲ್ಲಿಯೇ ಮಾದರಿಯಾಗಿದ್ದ ಪರೀಕ್ಷೆ ಹಾಗೂ ಆಯ್ಕೆ ವಿಧಾನದಲ್ಲಿ ಅಕ್ರಮ ಕಂಡುಬಂದಿರುವುದರಿಂದ ಹಿರಿಯ ಅಧಿಕಾರಿಗಳು ತಲೆ ತಗ್ಗಿಸಬೇಕಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.