ADVERTISEMENT

ಮೈಸೂರು ದಸರಾದಲ್ಲಿ ಉರ್ದು ಕವಿಗೋಷ್ಠಿ: ಶಾಸಕ ಸುನಿಲ್‌ಕುಮಾರ್‌ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2023, 11:17 IST
Last Updated 9 ಅಕ್ಟೋಬರ್ 2023, 11:17 IST
<div class="paragraphs"><p>ಬಿಜೆಪಿ ಶಾಸಕ ವಿ.ಸುನಿಲ್‌ಕುಮಾರ್</p></div>

ಬಿಜೆಪಿ ಶಾಸಕ ವಿ.ಸುನಿಲ್‌ಕುಮಾರ್

   

ಬೆಂಗಳೂರು: ನಾಡಹಬ್ಬ ದಸರಾದಲ್ಲಿ ಉರ್ದು ಕವಿಗೋಷ್ಠಿ ಆಯೋಜಿಸಿರುವುದನ್ನು ಬಿಜೆಪಿ ಶಾಸಕ ವಿ.ಸುನಿಲ್‌ಕುಮಾರ್‌ ತೀವ್ರವಾಗಿ ಆಕ್ಷೇಪಿಸಿದ್ದಾರೆ.

ಈ ಕುರಿತು ‘ಎಕ್ಸ್‌’ (ಟ್ವೀಟ್‌) ಮೂಲಕ ಸರ್ಕಾರದ ವಿರುದ್ಧ ಅವರು ಹರಿಹಾಯ್ದಿದ್ದು, ‘ರಾಜ್ಯ ಸರ್ಕಾರ ನಾಡಹಬ್ಬ ದಸರಾದಲ್ಲಿ ಉರ್ದು ಕವಿಗೋಷ್ಠಿಯನ್ನು ಆಯೋಜಿಸಿದೆ. ಕನ್ನಡದ ಶ್ರೀಮಂತ ಸಂಸ್ಕೃತಿಯ ಪ್ರದರ್ಶನಕ್ಕೆ ವೇದಿಕೆಯಾಗಬೇಕಿದ್ದ ದಸರಾದಲ್ಲಿ ಉರ್ದು ಹೇರಿಕೆ ಏಕೆ? ತನ್ನ ಮತ ಬ್ಯಾಂಕ್‌ ಓಲೈಕೆಗಾಗಿ ಕಾಂಗ್ರೆಸ್‌ ಪಕ್ಷ ಕನ್ನಡದ ಮೇಲೆ ಉರ್ದು ಹೇರುತ್ತಿದೆ’ ಎಂದಿದ್ದಾರೆ.

ADVERTISEMENT

‘ಟಿಪ್ಪು ನಿಜಗನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೊಂದು ಹೆಜ್ಜೆ ಇಟ್ಟಿದ್ದಾರೆ. ಮಹಿಷ ದಸರಾ, ಉರ್ದು ಕವಿಗೋಷ್ಠಿ ಜತೆಗೆ ಇನ್ನೆಷ್ಟು ಸಾಂಸ್ಕೃತಿಕ ದೌರ್ಜನ್ಯಕ್ಕೆ ನಿಮ್ಮ ಸಹಮತ? ದಸರಾದಲ್ಲಿ ನಾಡದೇವಿ ಚಾಮುಂಡಿ ಹಾಗೂ ಮೈಸೂರು ಒಡೆಯರ್ ಅವರ ವೈಭವವಾಗಬೇಕೇ ವಿನಾ ಟಿಪ್ಪು ಸಂಸ್ಕೃತಿಯಲ್ಲ’ ಎಂದೂ ಹೇಳಿದ್ದಾರೆ.

‘ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ವಿಚಾರದಲ್ಲಿ ಸೂಕ್ಷ್ಮತೆ ಹಾಗೂ ಜವಾಬ್ದಾರಿಯನ್ನು ಮರೆತಂತೆ ಕಾಣುತ್ತಿದೆ. ವರ್ಷಪೂರ್ತಿ ಕರ್ನಾಟಕ ಸಂಭ್ರಮ ಆಚರಿಸಲು ಹೊರಟವರು ದಸರಾದಲ್ಲಿ ಉರ್ದು ಸಂಭ್ರಮ ನಡೆಸಿದೆ ಹೇಗೆ’ ಎಂದು ಸುನಿಲ್‌ ಕುಮಾರ್‌ ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.