ADVERTISEMENT

‘ತುರ್ತು ಪರಿಸ್ಥಿತಿ: ಕಾಂಗ್ರೆಸ್‌ ನಾಯಕರು ಕ್ಷಮೆ ಕೇಳಲಿ’

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 4:12 IST
Last Updated 25 ಜೂನ್ 2024, 4:12 IST
<div class="paragraphs"><p>ಬಿಜೆಪಿ ಮುಖಂಡರು ತುರ್ತು ಪರಿಸ್ಥಿತಿ ವಿರೋಧಿಸಿ ನಗರ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಪೋಸ್ಟರ್‌ ಪ್ರದರ್ಶಿಸಿದರು. </p></div>

ಬಿಜೆಪಿ ಮುಖಂಡರು ತುರ್ತು ಪರಿಸ್ಥಿತಿ ವಿರೋಧಿಸಿ ನಗರ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಪೋಸ್ಟರ್‌ ಪ್ರದರ್ಶಿಸಿದರು.

   

ಮೈಸೂರು: ‘ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಕ್ಕೆ ಕಾಂಗ್ರೆಸ್ ನಾಯಕರು ಕ್ಷಮೆ ಕೇಳಬೇಕು’ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ ಒತ್ತಾಯಿಸಿದರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಲೋಕಸಭಾ ಸದಸ್ಯತ್ವ ಉಳಿಸಿಕೊಳ್ಳುವ ಸಲುವಾಗಿ ತುರ್ತು ಪರಿಸ್ಥಿತಿ ಹೇರಿದ್ದರು. ಅಲ್ಲದೆ, ಸಂವಿಧಾನಕ್ಕೆ ತಿದ್ದುಪಡಿ ತಂದಿದ್ದರು. ತುರ್ತು ಪರಿಸ್ಥಿತಿ ಹೇರಿದ ಕಾರಣಕ್ಕಾಗಿ ಇಂದಿರಾ ಗಾಂಧಿ ಅವರನ್ನು ಜನ ಸೋಲಿಸಿದರು’ ಎಂದರು.

ADVERTISEMENT

‘ಹೀಗಾಗಿಯೇ ಅಜ್ಜಿ ಮಾಡಿದ ತಪ್ಪಿಗಾಗಿ ಅವರ ಮೊಮ್ಮಗ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಕ್ಷಮೆ ಕೇಳಬೇಕು’ ಎಂದರು.

‘ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತಾರೆ; ಮೀಸಲಾತಿ ತೆಗೆದು ಹಾಕುತ್ತಾರೆಂದು ಕಾಂಗ್ರೆಸ್ ಸುಳ್ಳು ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಒಂದೆಡೆ ಗ್ಯಾರಂಟಿ ಯೋಜನೆ ನೀಡಿ, ಇನ್ನೊಂದೆಡೆ ಬೆಲೆ ಏರಿಕೆ ಮಾಡಿ ಜನರಿಗೆ ತೊಂದರೆ ಕೊಡುತ್ತಿದ್ದಾರೆ’ ಎಂದು ದೂರಿದರು.

ಸಂವಾದ ಇಂದು: ‘ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು’ ವತಿಯಿಂದ ತುರ್ತು ಪರಿಸ್ಥಿತಿ ಸಂವಿಧಾನಕ್ಕೆ ಮಾಡಿದ ಅಪಚಾರ ಕುರಿತು ಸಂವಾದ ಕಾರ್ಯಕ್ರಮವನ್ನು ಜೂನ್ 25ರ ಸಂಜೆ 5ಕ್ಕೆ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ. ಶಾಸಕ ವಿ. ಸುನಿಲ್ ಕುಮಾರ್, ಮುಖಂಡರಾದ ಪಿ. ರಾಜೀವ್, ಭೈರತಿ ಬಸವರಾಜ್ ಪಾಲ್ಗೊಂಡು ತುರ್ತು ಪರಿಸ್ಥಿತಿಯ ಕರಾಳ ಮುಖದ ಬಗ್ಗೆ ತಿಳಿಕೊಡಲಿದ್ದಾರೆ’ ಎಂದು ಹೇಳಿದರು.

ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಂ. ರಘು, ಕೇಬಲ್ ಮಹೇಶ್, ಗಿರಿಧರ್, ನಗರ ಉಪಾಧ್ಯಕ್ಷ ಜೋಗಿ ಮಂಜು, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಡಿ. ಲೋಹಿತ್, ಸಚಿನ್ ಪಾಲ್ಗೊಂಡಿದ್ದರು. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಪೋಸ್ಟರ್ ಪ್ರದರ್ಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.