ADVERTISEMENT

ಮೈಸೂರು | ಮುಡಾ ಅವ್ಯವಹಾರ: ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 14:18 IST
Last Updated 4 ಜುಲೈ 2024, 14:18 IST
ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಗುರುವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು - ಪ್ರಜಾವಾಣಿ ಚಿತ್ರ
ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಗುರುವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು - ಪ್ರಜಾವಾಣಿ ಚಿತ್ರ   

ಮೈಸೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ಎಸಗಿರುವವರನ್ನು ಬಂಧಿಸಬೇಕು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಕಚೇರಿಯಿಂದ ಮುಡಾ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಕಾರರನ್ನು ಪೊಲೀಸರು ರಾಮಸ್ವಾಮಿ ವೃತ್ತದಲ್ಲಿಯೇ ತಡೆದರು. ಬಳಿಕ ಅಲ್ಲಿಯೇ ಪ್ರತಿಭಟನೆ ಮುಂದುವರಿಯಿತು.

‘ಬಡವರ ಪರವಾಗಿ ಇರುತ್ತೇವೆಂದು ಹೇಳಿಕೊಂಡಿರುವ ಕಾಂಗ್ರೆಸ್ ಸರ್ಕಾರ ಬಡವರಿಗೆ ಸೇರಬೇಕಾದ ನಿವೇಶನಗಳನ್ನು ಬಲಾಢ್ಯರಿಗೆ ಹಂಚಿದೆ. ₹ 4 ಸಾವಿರ ಕೋಟಿಗೂ ಅಧಿಕ ಮೌಲ್ಯದ ಹಗರಣ ಇದು. ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಿ ಜೈಲಿಗೆ ಕಳುಹಿಸಬೇಕು. ನಗರಾಭಿವೃದ್ಧಿ ಸಚಿವರು ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು. ಪೊಲೀಸರು ಪ್ರತಿಭಟನನಿರತರನ್ನು ವಶಕ್ಕೆ ಪಡೆದು ಕರೆದೊಯ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.