ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್‌ಗಳ ಸೇವೆ ಆರಂಭವಾದರೂ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಎಚ್.ಡಿ.ಕೋಟೆ ಮತ್ತು ಸರಗೂರು ಪಟ್ಟಣದಿಂದ ಮೈಸೂರು, ಹುಣಸೂರು, ಎನ್. ಬೇಗೂರು, ಹೆಡಿಯಾಲ, ಗದ್ದಿಗೆ ಗ್ರಾಮಗಳಿಗೆ ಬಸ್ ಸಂಚಾರ ಪ್ರಾರಂಭವಾಗಿದೆ. ಬೆಂಗಳೂರು, ಶಿವಮೊಗ್ಗ, ಬಳ್ಳಾರಿ, ದಾವಣಗೆರೆ ಹಾಗೂ ಹಾಸನ ಜಿಲ್ಲೆಗಳಿಗೂ ಬಸ್‌ಗಳು ಹೋಗುತ್ತಿವೆ.
‘ಕೊರೊನಾ ಲಾಕ್‌ಡೌನ್‌ಗೂ ಮುಂಚೆ ಘಟಕದಿಂದ 100 ಶೆಡ್ಯೊಲ್ ಸಂಚಾರ ಇತ್ತು. ಈಗ ಕೇವಲ 40 ಶೆಡ್ಯೂಲ್ ಇದ್ದರೂ ಪ್ರಯಾಣಿಕರೇ ಬರುತ್ತಿಲ್ಲ. ಸರ್ಕಾರದ ಸೂಚನೆಯಂತೆ ಎಲ್ಲಾ ಬಸ್‌ಗಳಿಗೂ ರಾಸಾಯನಿಕ ದ್ರಾವಣ ಸಿಂಪಡಿಸಲಾಗುತ್ತದೆ. ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಿ, ಸ್ಯಾನಿಟೈಸರ್ ಕೊಡಲಾಗುತ್ತದೆ. ಚಾಲಕರು ಮತ್ತು ನಿರ್ವಾಹಕರಿಗೆ ಗ್ಲೌಸ್ ಮತ್ತು ಮಾಸ್ಕ್ ನೀಡಲಾಗಿದೆ. ಒಂದು ಬಸ್‌ನಲ್ಲಿ 30 ಪ್ರಯಾಣಿಕರಿಗೆ ಮಾತ್ರ ಅವಕಾಶವಿದೆ. ಆದರೂ ಪ್ರಯಾಣಿಕರ ಸಂಖ್ಯೆ ಕಡಿಮೆಯಿದೆ’ ಎಂದು ಎಚ್.ಡಿ.ಕೋಟೆ ಘಟಕದ ವ್ಯವಸ್ಥಾಪಕ ತ್ಯಾಗರಾಜ್ ಮಾಹಿತಿ ನೀಡಿದರು.
‘ಸಾರಿಗೆ ಬಸ್‌ಗಳ ಸಂಚಾರದ ಬಗ್ಗೆ ಸಾರ್ವಜನಿಕರಲ್ಲಿ ಇನ್ನೂ ಗೊಂದಲವಿದೆ. ಕೊರೊನಾ ಭಯದಿಂದ ಜನರು ಖಾಸಗಿ ವಾಹನಗಳು ಮತ್ತು ಸ್ವಂತ ವಾಹನಗಳನ್ನು ಅವಲಂಬಿಸಿದ್ದಾರೆ’ ಎಂದು ಪ್ರಯಾಣಿಕ ಕೆ.ಎಂ.ಮಹೇಶ್ ಹೇಳುತ್ತಾರೆ.
‘ಎಚ್.ಡಿ.ಕೋಟೆಯಿಂದ ಮೈಸೂರಿಗೆ ಹೋಗುವ ಮಾರ್ಗ ಮಧ್ಯೆಯೂ ನಿಲುಗಡೆ ಮಾಡಲಾಗುತ್ತಿದೆ. ಇಷ್ಟೆಲ್ಲಾ ಅನುಕೂಲ ಮಾಡಿಕೊಟ್ಟರೂ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿಲ್ಲ. ಖಾಸಗಿ ವಾಹನಗಳಿಗೆ ದುಪ್ಪಟ್ಟು ಹಣ ಕೊಟ್ಟು ಹೋಗುವುದರಲ್ಲಿ ಅರ್ಥವಿಲ್ಲ. ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಪ್ರಯಾಣ ಮಾಡಿ’ ಎಂದು ತ್ಯಾಗರಾಜ್ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.