ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ರಥೋತ್ಸವವು ಮಂಗಳವಾರ ಸರಳವಾಗಿ ನೆರವೇರಿತು.
ಈ ಬಾರಿದೊಡ್ಡರಥದ ಬದಲಿಗೆ ಚಿಕ್ಕ ರಥವನ್ನು ಉತ್ಸವಕ್ಕೆ ಬಳಕೆ ಮಾಡಿಕೊಳ್ಳಲಾಯಿತು.ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರತಿ ಬಾರಿಯಂತೆ ಈ ಬಾರಿಯೂ ರಥೋತ್ಸವಕ್ಕೆ ಚಾಲನೆ ನೀಡಿದರು.
ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ ಅವರ ನೇತೃತ್ವದಲ್ಲಿ ನಸುಕಿನ 4 ಗಂಟೆಯಿಂದಲೇ ಧಾರ್ಮಿಕ ಕೈಂಕರ್ಯಗಳು ಆರಂಭವಾದವು. ದೇಗುಲದ ಹೊರ ಆವರಣದಲ್ಲಿ ಮೆರವಣಿಗೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.