ADVERTISEMENT

MUDA Scam | ಸಿಎಂ ವಿಚಾರಣೆ ಇಂದು: ಪೊಲೀಸ್ ಬಂದೋಬಸ್ತ್‌

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2024, 23:47 IST
Last Updated 5 ನವೆಂಬರ್ 2024, 23:47 IST
ಮೈಸೂರಿನ ಲೋಕಾಯುಕ್ತ ಎಸ್‌.ಪಿ. ಕಚೇರಿ
ಮೈಸೂರಿನ ಲೋಕಾಯುಕ್ತ ಎಸ್‌.ಪಿ. ಕಚೇರಿ   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದಲ್ಲಿ ಬುಧವಾರ (ನ.6) ಇಲ್ಲಿನ ಲೋಕಾಯುಕ್ತ ಎಸ್‌.ಪಿ. ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದು, ಕಚೇರಿ ಸುತ್ತಮುತ್ತ ಪೊಲೀಸರು ಬಂದೋಬಸ್ತ್‌ ಕಲ್ಪಿಸಿದ್ದಾರೆ.

ಅವರು ಬೆಳಿಗ್ಗೆ 9.30ಕ್ಕೆ ನಗರಕ್ಕೆ ಬರಲಿದ್ದು, ಮಧ್ಯಾಹ್ನ 12ರವರೆಗೆ ಇಲ್ಲಿರಲಿದ್ದಾರೆ. ನಂತರದಲ್ಲಿ ಇಲ್ಲಿಂದ ಚನ್ನಪಟ್ಟಣಕ್ಕೆ ತೆರಳಲಿದ್ದಾರೆ. ಲೋಕಾಯುಕ್ತ ಎಸ್‌.ಪಿ. ಟಿ.ಜೆ. ಉದೇಶ್‌ ನೇತೃತ್ವದ ತಂಡವು ಅವರನ್ನು ವಿಚಾರಣೆ ನಡೆಸಲಿದೆ.

ಸಿದ್ದರಾಮಯ್ಯ ಅವರು ನಾಲ್ಕು ದಶಕಗಳ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ಲೋಕಾಯುಕ್ತ ವಿಚಾರಣೆ ಎದುರಿಸುತ್ತಿದ್ದಾರೆ. ವಿಚಾರಣೆಯ ಕಾರಣ ಡಿ. ಸುಬ್ಬಯ್ಯ ರಸ್ತೆಯ ಲೋಕಾಯುಕ್ತ ಕಚೇರಿ ಸುತ್ತಮುತ್ತ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದಾರೆ. ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ದೇವರಾಜ ಪೊಲೀಸ್‌ ಠಾಣೆಯಲ್ಲಿ ಅಧಿಕಾರಿಗಳ ಜೊತೆ ಮಂಗಳವಾರ ಸಂಜೆ ಸಭೆ ನಡೆಸಿ, ಬಂದೋಬಸ್ತ್‌ ವ್ಯವಸ್ಥೆಯನ್ನು ಪರಿಶೀಲಿಸಿದರು.

ADVERTISEMENT
ಸಿದ್ದರಾಮಯ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.