ಮೈಸೂರು: ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿವಂಗತ ಆರ್.ಧ್ರುವನಾರಾಯಣ ಅವರ ಪತ್ನಿ, ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ಅವರ ತಾಯಿ ವೀಣಾ (54) ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.
ಅವರಿಗೆ ದರ್ಶನ್ ಸೇರಿದಂತೆ ಇಬ್ಬರು ಪುತ್ರರಿದ್ದಾರೆ.
ವಿಜಯನಗರದ ಅವರ ಸ್ವಗೃಹದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸಂಜೆ ಚಾಮರಾಜನಗರ ಜಿಲ್ಲೆಯ ಸ್ವಗ್ರಾಮ ಹೆಗ್ಗವಾಡಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇವನ್ನೂ ಓದಿ...
* ಚಾಮರಾಜನಗರದ ಮಾಜಿ ಸಂಸದ ಆರ್. ಧ್ರುವನಾರಾಯಣ ನಿಧನ
* ಧ್ರುವನಾರಾಯಣ: ಒಂದು ಮತದಿಂದ ಗೆದ್ದಿದ್ದ ಶಾಸಕ, ಸಂಸದರಾಗಿ ಮನೆ ಮಾತು
* PHOTOS | 2004ರಲ್ಲಿ ಧ್ರುವನಾರಾಯಣ ಅವರು ಒಂದು ಮತದಿಂದ ಗೆದ್ದ ಕ್ಷಣಗಳು...
* ಮಾಜಿ ಸಂಸದ ಆರ್. ಧ್ರವನಾರಾಯಣ ನಿಧನಕ್ಕೆ ಗಣ್ಯರಿಂದ ಸಂತಾಪ
* ಹುಟ್ಟೂರು ಹೆಗ್ಗವಾಡಿಯಲ್ಲಿ ನಾಳೆ ಧ್ರುವನಾರಾಯಣ ಅಂತ್ಯಕ್ರಿಯೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.