ADVERTISEMENT

ಪಕ್ಷ ಸೇರ್ಪಡೆ: ಮುಖಂಡರ ಕಡೆಗಣಿಸದಿರಿ ಎಂದ ಸೈಯದ್ ಇಕ್ಬಾಲ್

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2023, 13:51 IST
Last Updated 29 ನವೆಂಬರ್ 2023, 13:51 IST
<div class="paragraphs"><p>ಕಾಂಗ್ರೆಸ್‌</p></div>

ಕಾಂಗ್ರೆಸ್‌

   

ಮೈಸೂರು: ‘ಅನ್ಯ ಪಕ್ಷಗಳ ಮುಖಂಡರು ಮತ್ತು ನಗರ ಪಾಲಿಕೆ ಮಾಜಿ ಸದಸ್ಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಕ್ಷೇತ್ರದ ಶಾಸಕರು ಮತ್ತು ಬ್ಲಾಕ್ ಅಧ್ಯಕ್ಷರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು’ ಎಂದು ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್ ಇಕ್ಬಾಲ್ ಆಗ್ರಹಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನರಸಿಂಹರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವ ಮುಖಂಡರ ಬಗ್ಗೆ ಶಾಸಕರು ಮತ್ತು ಬ್ಲಾಕ್ ಅಧ್ಯಕ್ಷರಿಗೆ ಯಾವುದೇ ಮಾಹಿತಿಯಿಲ್ಲ. ನಮ್ಮನ್ನು ಕಡೆಗಣಿಸಿ ಪಕ್ಷಕ್ಕೆ ಬಂದವರು ಪಾಲಿಕೆ ಚುನಾವಣೆಯ ಟಿಕೆಟ್‌ಗೂ ಆಕಾಂಕ್ಷೆ ವ್ಯಕ್ತಪಡಿಸುತ್ತಿದ್ದಾರೆ. ಇದು ಈಗಾಗಲೇ ಪಕ್ಷಕ್ಕೆ ಸಾಕಷ್ಟು ದುಡಿದಿರುವ ಕಾರ್ಯಕರ್ತರಿಗೆ ಬೇಸರ ತಂದಿದೆ’ ಎಂದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ಪಕ್ಷದ ಪರಿಶಿಷ್ಟ ಜಾತಿ ಘಟಕದ ನಗರ ಅಧ್ಯಕ್ಷ ರಿತೇಶ್, ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್, ಎನ್.ಆರ್.ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ವಸೀಮ್, ಮುಖಂಡ ಶೌಖತ್ ಅಲಿ ಖಾನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.