ಮೈಸೂರು: ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವದಲ್ಲಿ ಸೋಮವಾರ ವಿವಿಧ ನಿಕಾಯಗಳ ಒಟ್ಟು 1,519 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಜಯಚಾಮರಾಜೇಂದ್ರ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನವದೆಹಲಿಯ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತಿನ (ಎಐಸಿಟಿಇ) ಚೇರ್ಮನ್ ಪ್ರೊ.ಅನಿಲ್ ಡಿ. ಸಹಸ್ರಬುದ್ಧೆ ಹಾಗೂ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಪ್ರದಾನ ಮಾಡಿದರು.
997 ಬಿಇ, 28 ಬಿಸಿಎ, 199 ಎಂ.ಟೆಕ್, 57 ಎಂಸಿಎ, 33 ಎಂ.ಎಸ್ಸಿ, 200 ಎಂಬಿಎ ಹಾಗೂ ಐವರು ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ನೀಡಲಾಯಿತು. ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 33 ವಿದ್ಯಾರ್ಥಿಗಳು ಹಾಗೂ 20 ವಿದ್ಯಾರ್ಥಿಗಳಿಗೆ ದತ್ತಿ ಬಹುಮಾನ ಹಾಗೂ ಪದಕ ವಿತರಿಸಲಾಯಿತು.
ಕುಲಪತಿ ಪ್ರೊ.ಎ.ಎನ್.ಸಂತೋಷ್ ಕುಮಾರ್, ಕುಲಸಚಿವ ಪ್ರೊ.ಎಸ್.ಎ.ಧನರಾಜ್, ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಬಿ.ಕಿವಡೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.