ADVERTISEMENT

ಪರಿಷತ್ ಚುನಾವಣೆ: ಮಂಡ್ಯದ ವಿವೇಕಾನಂದಗೆ ಬಿ ಫಾರಂ ನೀಡಿದ ಹೆಚ್‌.ಡಿ. ದೇವೇಗೌಡ

​ಪ್ರಜಾವಾಣಿ ವಾರ್ತೆ
Published 15 ಮೇ 2024, 5:26 IST
Last Updated 15 ಮೇ 2024, 5:26 IST
   

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಅಖೈರುಗೊಳಿಸಿದೆ.

ಮಂಡ್ಯದ ವಿವೇಕಾನಂದ ಅವರಿಗೆ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಬುಧವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಿ ಫಾರಂ ವಿತರಿಸಿದ್ದಾರೆ.

ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಈ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆ. ಮೇ 12ರಂದು ಬಿಜೆಪಿ ಪ್ರಕಟಿಸಿದ್ದ ಪಟ್ಟಿಯಲ್ಲಿ ಮೈಸೂರು ‌ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಈ.ಸಿ. ನಿಂಗರಾಜ್ ಗೌಡ ಅವರಿಗೆ ಟಿಕೆಟ್ ‌ಘೋಷಿಸಲಾಗಿತ್ತು. ನಂತರ ನಡೆದ ಬೆಳವಣಿಗೆಯಲ್ಲಿ ಜೆಡಿಎಸ್ ನಾಯಕರ ಒತ್ತಾಯದಂತೆ ಕ್ಷೇತ್ರವನ್ನು ಬಿಟ್ಟು ಕೊಡಲಾಗಿದೆ. ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಹಾಗೂ ವಿವೇಕಾನಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಇವರಲ್ಲಿ ವಿವೇಕಾನಂದ ಅವರು ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ನಿಂಗರಾಜ್ ಗೌಡ ಅವರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ವಿವೇಕಾನಂದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ.

ಬಿ ಫಾರಂ ವಿತರಣೆ ಸಂದರ್ಭದಲ್ಲಿ ಜೆಡಿಎಸ್ ಪ್ರಮುಖರ ಸಮಿತಿಯ ಅಧ್ಯಕ್ಷ ಜಿ.ಟಿ. ದೇವೇಗೌಡ, ಮುಖಂಡರಾದ ನಿರಂಜನ ಮೂರ್ತಿ ಹಾಗೂ ನಾಗಣ್ಣ ಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.