ಮೈಸೂರು: ಸಾಹಿತಿ ಎಸ್.ಎಲ್.ಭೈರಪ್ಪ ಅವರು ಮುಖ್ಯಮಂತ್ರಿ ಕೋವಿಡ್-19 ಪರಿಹಾರ ನಿಧಿಗಾಗಿ ₹ 1 ಲಕ್ಷ ದೇಣಿಗೆ ಚೆಕ್ ಅನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಮೈಸೂರು ಸಂಸದ ಪ್ರತಾಪ ಸಿಂಹ ಹಾಜರಿದ್ದರು.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆಯಾಗಿದೆ. ನಿನ್ನೆ (ಏ.8) ಸಂಜೆ 5ರಿಂದ ಇಂದು (ಏ.9) ಸಂಜೆ 5 ಗಂಟೆಯ ಅವಧಿಯಲ್ಲಿ ಒಟ್ಟು 16 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 28 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು 6 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 5, ಬೆಳಗಾವಿಯಲ್ಲಿ 4, ಬಾಗಲಕೋಟೆಯಲ್ಲಿ 3, ಮೈಸೂರಿನಲ್ಲಿ 2 ಹಾಗೂ ಚಿಕ್ಕಬಳ್ಳಾಪುರ, ಧಾರವಾಡ, ತಲಾ ಒಂದು ಪ್ರಕರಣಗಳು ದೃಢಪಟ್ಟಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.