ADVERTISEMENT

ಹನಗೋಡು: ಹುಲಿ ದಾಳಿಗೆ ಹಸು ಸಾವು

​ಪ್ರಜಾವಾಣಿ ವಾರ್ತೆ
Published 28 ಜುಲೈ 2024, 13:58 IST
Last Updated 28 ಜುಲೈ 2024, 13:58 IST
ಅ
   

ಹನಗೋಡು: ಹೋಬಳಿಯ ಅರಸು ಕಲ್ಲಹಳ್ಳಿಯ ಚಂದ್ರಶೇಖರ್ ಎಂಬುವವರಿಗೆ ಸೇರಿದ ಹಸುವನ್ನು ಹುಲಿ ಕೊಂದುಹಾಕಿದೆ.

ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ ಮುತ್ತುರಾಯನಹೊಸಹಳ್ಳಿ ಅರಣ್ಯ ಪ್ರದೇಶದಿಂದ ಧಾವಿಸಿದ ಹುಲಿಯು ದಾಳಿ ಮಾಡಿದೆ. ಹಸು ಸುಮಾರು 50 ಸಾವಿರ ಬೆಲೆ ಬಾಳುತ್ತಿತ್ತು. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಹನಗೋಡು, ಕಲ್ಲಹಳ್ಳಿ ಭಾಗದಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಹುಲಿ ಕಾಟ ತಪ್ಪಿಸುವಂತೆ ಹಾಗೂ ಸಂಕಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.