ADVERTISEMENT

ಮೈಸೂರು | ರಾಗಿ, ಭತ್ತ ಖರೀದಿ: ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2024, 14:29 IST
Last Updated 29 ಜನವರಿ 2024, 14:29 IST
<div class="paragraphs"><p>ಭತ್ತ ಖರೀದಿ </p></div>

ಭತ್ತ ಖರೀದಿ

   

ಮೈಸೂರು: ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ನೋಂದಣಿ ಕೇಂದ್ರ ತೆರೆಯಲಾಗಿದ್ದು, ಈಗಾಗಲೇ ನೋಂದಣಿ ಆಗಿರುವ ರೈತರಿಂದ ಉತ್ಪನ್ನ ಖರೀದಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖರೀದಿ ಹಂತದಲ್ಲಿ ಕೇಂದ್ರ ಸರ್ಕಾರದಿಂದ ನಿಗದಿಪಡಿಸಿದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸುವಂತೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲು ತೆರೆಯಲಾಗಿರುವ ಪ್ರತಿ ಖರೀದಿ ಕೇಂದ್ರಕ್ಕೆ ಕೃಷಿ ಇಲಾಖೆಯ ವತಿಯಿಂದ ಗ್ರೇಡರ್‌ಗಳನ್ನು ನೇಮಿಸಬೇಕು. ಖರೀದಿ ದಿನಾಂಕ ಕುರಿತು ರೈತರಿಗೆ ಜಾಗೃತಿ ಮೂಡಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್, ರಾಜ್ಯ ಉಗ್ರಾಣ ನಿಗಮದ ಪ್ರಾದೇಶಿಕ ಆಯುಕ್ತ ರೇಣುಕಾ ಸ್ವಾಮಿ ಹಾಗೂ ಕೃಷಿ, ಆಹಾರ ಇಲಾಖೆಯ ಅಧಿಕಾರಿಗಳು, ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರು ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.