ADVERTISEMENT

ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಭಗವಾನ್ ಮನೆಗೆ ಮುತ್ತಿಗೆ ಯತ್ನ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2023, 7:45 IST
Last Updated 14 ಅಕ್ಟೋಬರ್ 2023, 7:45 IST
<div class="paragraphs"><p>ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಭಗವಾನ್ ಮನೆಗೆ ಮುತ್ತಿಗೆ ಯತ್ನ</p></div>

ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಭಗವಾನ್ ಮನೆಗೆ ಮುತ್ತಿಗೆ ಯತ್ನ

   

ಮೈಸೂರು: ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಒಕ್ಕಲಿಗ ಸಂಘದ ಸದಸ್ಯರು ವಿಚಾರವಾದಿ ಕೆ.ಎಸ್. ಭಗವಾನ್ ಅವರ ಮನೆಗೆ ಮುತ್ತಿಗೆ‌ ಹಾಕಲು ಶನಿವಾರ ಯತ್ನಿಸಿದರು.

ಮಹಿಷ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಭಗವಾನ್ ‘ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಕುವೆಂಪು ಹೇಳಿದ್ದರು’ ಎಂದು ಹೇಳಿಕೆ ನೀಡಿದ್ದರು.

ADVERTISEMENT

ಇದರಿಂದ ಆಕ್ರೋಶಗೊಂಡ ಮೈಸೂರು- ಚಾಮರಾಜ ಒಕ್ಕಲಿಗರ ಸಂಘದ ಸದಸ್ಯರು ನಗರದ ಕುವೆಂಪು ನಗರದಲ್ಲಿರುವ ಭಗವಾನ್ ಮನೆಗೆ ಮುತ್ತಿಗೆಗೆ ಯತ್ನಿಸಿದರು. ಅವರ ವಿರುದ್ಧ ‌ಘೋಷಣೆ ಕೂಗಿದರು. ಆಕ್ರೋಶ ವ್ಯಕ್ತಪಡಿಸಿದರು. ಅವರನ್ನು ಪೊಲೀಸರು ತಡೆದರು. ಆಗ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಘೋಷಣೆ ಕೂಗುತ್ತಾ ರಸ್ತೆಯಲ್ಲೇ ಧರಣಿ ಕುಳಿತರು. ಅವರನ್ನು ‌ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.

ಕುವೆಂಪುನಗರ ಠಾಣೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಭಗವಾನ್ ಅವರ ಮನೆಯ ಬಳಿ ಭದ್ರತೆ ಒದಗಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.