ADVERTISEMENT

ಅಗತ್ಯವಿದ್ದರೆ ಜಮೀರ್ ವಿರುದ್ಧ ಶಿಸ್ತುಕ್ರಮ: ಗೃಹ ಸಚಿವ ಪರಮೇಶ್ವರ್

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2024, 6:10 IST
Last Updated 18 ನವೆಂಬರ್ 2024, 6:10 IST
ಡಾ. ಜಿ. ಪರಮೇಶ್ವರ್ ಗೃಹ ಸಚಿವ
ಡಾ. ಜಿ. ಪರಮೇಶ್ವರ್ ಗೃಹ ಸಚಿವ   

ಮೈಸೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಅಧ್ಯಕ್ಷರು ಪಕ್ಷದ ಶಿಸ್ತುಪಾಲನಾ ಸಮಿತಿಗೆ ವರದಿ ಕೊಟ್ಟರೆ ಸಮಿತಿ ಅಧ್ಯಕ್ಷ ರಹೀಂ ಖಾನ್ ಕ್ರಮ ಕೈಗೊಳ್ಳಬಹುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು 'ನಾನು ಈ ಹಿಂದೆ ಪಕ್ಷದ ಶಿಸ್ತುಸಮಿತಿ ಸದಸ್ಯನಾಗಿದ್ದೆ. ಆಗ ಪಕ್ಷಕ್ಕೆ ಹಾನಿಯಾಗುವ ಹೇಳಿಕೆ ಕೊಡುವ ನಾಯಕರನ್ನು ಅವರು ಎಷ್ಟೇ ದೊಡ್ಡವರಿದ್ದರೂ ನೋಟಿಸ್ ಕೊಟ್ಟು ಕರೆಸುತ್ತಿದ್ದೆವು. ಅಗತ್ಯ ಬಿದ್ದರೆ ಅಮಾನತು ಸಹ ಮಾಡುತ್ತಿದ್ದೆವು' ಎಂದು ಹೇಳಿದರು.

ಬಿಜೆಪಿ ವಿರುದ್ಧದ ಶೇ 40 ಕಮಿಷನ್ ಆರೋಪಕ್ಕೆ ದಾಖಲೆ ಇಲ್ಲ ಎಂದು ಲೋಕಾಯುಕ್ತ ತನಿಖೆಯಲ್ಲಿ ಉಲ್ಲೇಖಿಸಿರುವ ಕುರಿತು ಪ್ರತಿಕ್ರಿಯಿಸಿ 'ಲೋಕಾಯುಕ್ತ ಪೊಲೀಸರು ಯಾವ ಆಧಾರದ‌ ಮೇಲೆ ಸಾಕ್ಷಿ ಇಲ್ಲ ಎಂದಿದ್ದಾರೆ ಎಂಬುದನ್ನು ನೋಡಬೇಕಿದೆ. ಅಗತ್ಯ ಬಿದ್ದರೆ ಮರು ತನಿಖೆಗೆ ಸಿದ್ಧರಿದ್ದೇವೆ' ಎಂದರು.

ADVERTISEMENT

'ಶಾಸಕರ ಖರೀದಿಗೆ ಈಗಲೂ ಬಿಜೆಪಿ ಯತ್ನಿಸುತ್ತಿದೆ. ಈ ವಿಚಾರವಾಗಿ ದಾಖಲೆ‌ ಸಿಕ್ಕರೆ ಅದರ ಬಗ್ಗೆಯೂ ತನಿಖೆ ಮಾಡುತ್ತೇವೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.