ADVERTISEMENT

ನ್ಯಾಯಾಲಯದ ತೀರ್ಪು ಪಾಲಿಸದಿರುವುದು ಖಂಡನೀಯ: ಬಿಜೆಪಿ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕರ್ತರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 25 ಮೇ 2024, 15:49 IST
Last Updated 25 ಮೇ 2024, 15:49 IST
‘ಕೊಲ್ಕತ್ತಾ ಹೈಕೋರ್ಟ್‌ ತೀರ್ಪು ವಿರೋಧಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡುತ್ತಿದೆ’ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕರ್ತರು ಶನಿವಾರ ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟಿಸಿದರು
‘ಕೊಲ್ಕತ್ತಾ ಹೈಕೋರ್ಟ್‌ ತೀರ್ಪು ವಿರೋಧಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡುತ್ತಿದೆ’ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕರ್ತರು ಶನಿವಾರ ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟಿಸಿದರು   

ಮೈಸೂರು: ‘ಕೋಲ್ಕತ್ತಾ ಹೈಕೋರ್ಟ್‌ ತೀರ್ಪು ವಿರೋಧಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡುತ್ತಿದೆ’ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕರ್ತರು ಶನಿವಾರ ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟಿಸಿದರು.

‘ಕೋಲ್ಕತ್ತಾ ಹೈಕೋರ್ಟ್‌ ತೀರ್ಪು ವಿರೋಧಿಸುತ್ತಿರುವ, ಹಿಂದುಳಿದ ವರ್ಗದ ವಿರೋಧಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಧಿಕ್ಕಾರ’, ‘ಒಬಿಸಿಗೆ ಮೀಸಲಾದ ಮೀಸಲಾತಿಯನ್ನು ಮುಸಲ್ಮಾನರಿಗೆ ಕೊಡಲು ಹೊರಟಿರುವ ತೃಣಮೂಲ ಕಾಂಗ್ರೆಸ್‌ಗೆ ಧಿಕ್ಕಾರ’, ‘ಒಬಿಸಿ ಮೀಸಲಾತಿ ವಿರೋಧಿ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟಕ್ಕೆ ಧಿಕ್ಕಾರ’ ಇತ್ಯಾದಿ ಫಲಕಗಳನ್ನು ಪ್ರದರ್ಶಿಸಿ, ಘೋಷಣೆ ಕೂಗಿದರು.

‘ಮಮತ ಬ್ಯಾನರ್ಜಿ ಅವರು ನ್ಯಾಯಾಲಯ ಕೊಟ್ಟಿರುವ ತೀರ್ಪಿಗೆ ವಿರುದ್ಧವಾಗಿ ಮುಸ್ಲಿಂಮರನ್ನು ಓಬಿಸಿಗೆ ಸೇರಿಸುತೇವೆಂದು ನ್ಯಾಯಾಲಯ ತೀರ್ಪಿನ ವಿರುದ್ಧ ಹೇಳಿಕೆ ನೀಡಿರುವುದು ಖಂಡನೀಯ. ನ್ಯಾಯಾಲಯಕ್ಕಿಂತ ದೊಡ್ಡವರು ಯಾರು ಇಲ್ಲ. ನ್ಯಾಯಾಲಯಕ್ಕೆ ಗೌರವ ನೀಡಬೇಕು’ ಎಂದು ಆಗ್ರಹಿಸಿದರು.

ADVERTISEMENT

ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ ಮಾತನಾಡಿ, ‘ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಾಂಗ್ಲಾದೇಶದಿಂದ ವಲಸೆ ಬಂದ ಮುಸ್ಲಿಂರನ್ನು ತೃಪ್ತಿಪಡಿಸಲು ಹಾಗೂ ಮುಸ್ಲಿಂ ಮತ್ತು ಕ್ರೈಸ್ತರ ಮತಗಳನ್ನು ಸೆಳೆಯಲು ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಇದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ನಗರ ಒಬಿಸಿ ಮೋರ್ಚಾ ಅಧ್ಯಕ್ಷ ಮೈ.ಪು.ರಾಜೇಶ್, ಕೆ.ಸೋಮಶೇಖರ ರಾಜು, ಸತೀಶ್, ನಂಜಪ್ಪ ಮಣಿ, ಎಸ್.ಟಿ.ಮೋರ್ಚಾ ಅಧ್ಯಕ್ಷ ಪಡುವಾರಹಳ್ಳಿ ರಾಮಕೃಷ್ಣ, ನಗರಪಾಲಿಕೆ ಮಾಜಿ ಸದಸ್ಯ ಎಂ.ಕೆ.ಶಂಕರ್, ನಾರಾಯಣ ಲೋಲಪ್ಪ, ಕೃಷ್ಣ ನಾಯಕ, ಸ್ಮಾರ್ಟ್ ಮಂಜು, ಗೋವಿಂದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.