ಹುಣಸೂರು: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಸರ್ಕಾರದ ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ’ ಎಂದು ದಲಿತ ಮುಖಂಡ ನಿಂಗರಾಜ ಮಲ್ಲಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿಯನ್ನು ದಲಿತ ಮುಖಂಡರು ಭೇಟಿ ಮಾಡಿ, ಮೀಸಲು ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳುತ್ತಿರುವುದರಿಂದ ಸಮುದಾಯಗಳ ಅಭಿವೃದ್ಧಿ ಕುಂಠಿತವಾಗಲಿದೆ. ನಿಮ್ಮವರಿಂದಲೇ ಸಾಮಾಜಿಕ ನ್ಯಾಯಕ್ಕೆ ಕಪ್ಪುಚುಕ್ಕಿ ಉಂಟಾಗಿದೆ ಎಂದು ತಿಳಿಸಿ ಮನವಿ ಮಾಡಲಾಗಿದೆ ಎಂದರು.
ಮುಖ್ಯಮಂತ್ರಿಗಳ ಭೇಟಿ ಸಮಯದಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರಾದ ದಿವಾಕರ್, ದೇವೇಂದ್ರ, ಕುಮಾರ್, ಶ್ರೀಧರ್, ನಂದಕುಮಾರ್, ಮಲ್ಲೇಶ್, ಸ್ವಾಮಿ, ಲೋಕೇಶ್, ರಾಜಪ್ಪ, ಕೋಮಲಾ, ಶೈಲಜಾ, ಶಿವಶೆಟ್ಟಿ, ರಾಧಾ, ರಾಜೇಶ್ವರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.