ಮೈಸೂರು: ಲೇಖಕಿ, ಸಂಶೋಧಕಿ ಮಂಗಳೂರಿನ ಬಿ.ಎಂ. ರೋಹಿಣಿ ಅವರ ‘ವೇಶ್ಯಾವಾಟಿಕೆಯ ಕಥೆ-ವ್ಯಥೆ’ ಸಂಶೋಧನಾ ಕೃತಿಯನ್ನು 2023ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮೈಸೂರಿನ ಸಮತಾ ಅಧ್ಯಯನ ಕೇಂದ್ರವು ಸ್ಥಾಪಿಸಿರುವ ಈ ಪ್ರಶಸ್ತಿಗೆ 2019-2022ರ ಅವಧಿಯಲ್ಲಿ ಮಹಿಳೆಯರಿಂದ ಪ್ರಕಟವಾದ ‘ವಿಮರ್ಶೆ ಮತ್ತು ಸಂಶೋಧನಾ ಕೃತಿ’ಗಳನ್ನು ಆಹ್ವಾನಿಸಲಾಗಿತ್ತು.
46 ಲೇಖಕಿಯರು ಕೃತಿಗಳನ್ನು ಕಳುಹಿಸಿದ್ದರು. ಅವುಗಳನ್ನು ಅವಲೋಕಿಸಿದ ಡಾ.ಎಂ. ಉಷಾ, ಡಾ.ಸೆಲ್ವಕುಮಾರಿ ಮತ್ತು ಡಾ.ಆರ್. ಸುನಂದಮ್ಮ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಸಂಶೋಧನೆಯ ವಸ್ತು, ವ್ಯಾಪ್ತಿ, ವಿಷಯ ಮತ್ತು ಒಳನೋಟಗಳನ್ನು ಪರಿಗಣಿಸಿ ರೋಹಿಣಿ ಅವರ ಕೃತಿಯನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ₹ 25ಸಾವಿರ ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿದೆ.
‘ಜೂನ್ 1ರಂದು ಮೈಸೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಕೇಂದ್ರದ ಅಧ್ಯಕ್ಷೆ ಡಾ.ಸಬಿಹಾ ಭೂಮಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.