ADVERTISEMENT

ನ್ಯಾಯದಾನದಲ್ಲೂ ಕೇಂದ್ರ ಸರ್ಕಾರದ ಹಸ್ತಕ್ಷೇಪ: ಯತೀಂದ್ರ ಆರೋಪ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2024, 13:34 IST
Last Updated 13 ನವೆಂಬರ್ 2024, 13:34 IST
<div class="paragraphs"><p>ಯತೀಂದ್ರ&nbsp;ಸಿದ್ದರಾಮಯ್ಯ</p></div>

ಯತೀಂದ್ರ ಸಿದ್ದರಾಮಯ್ಯ

   

ಮೈಸೂರು: 'ಇಂದು ಕೆಲವು ನ್ಯಾಯಾಲಯಗಳು ಸಹ ಕೇಂದ್ರ ಸರ್ಕಾರ ಹೇಳಿದ ರೀತಿಯಲ್ಲಿ ತೀರ್ಪು ಕೊಡುವ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ. ಹೀಗೆಯೇ ಆದರೆ ನಾವು ಎಲ್ಲಿಗೆ ಹೋಗಬೇಕು' ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದರು.

ತಿ. ನರಸೀಪುರ ವಿಧಾನಸಭಾ ಕ್ಷೇತ್ರದ ಸೋಸಲೆ ಗ್ರಾಮದ ಬಳಿ ಬುಧವಾರ ₹ 470 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ADVERTISEMENT

‘ವಿರೋಧ ಪಕ್ಷಗಳು ಈ ರೀತಿ ನಮ್ಮ ಮೇಲೆ ಷಡ್ಯಂತ್ರ ಮಾಡಿ, ಸುಳ್ಳು ಆರೋಪ‌ ಮಾಡಿದಾಗ ನಾವು ನ್ಯಾಯಾಲಯಗಳ ಮೊರೆ ಹೋಗಿ ಕಾನೂನಾತ್ಮಕ ಹೋರಾಟ ಮಾಡುವ ಪ್ರಯತ್ನ ಮಾಡುತ್ತೇವೆ. ನ್ಯಾಯ ಸಿಗುವ ವಿಶ್ವಾಸದಲ್ಲಿ ಇರುತ್ತೇವೆ. ಆದರೆ ಇಂದು ಎಲ್ಲ ಸಂಸ್ಥೆಗಳು ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ಇರುವುದರಿಂದ ನಮಗೆ ನ್ಯಾಯ ಸಿಗುತ್ತಿಲ್ಲ. ಅಂತಿಮವಾಗಿ ನಾವು ಜನರ ನ್ಯಾಯಾಲಯಕ್ಕೆ ಹೋಗಬೇಕಾಗುತ್ತದೆ. ಎಲ್ಲಿಯವರೆಗೆ ಜನರ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ನಾವು ಹೆದರುವುದಿಲ್ಲ' ಎಂದು ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಸಹಿಸಲಾರದೇ, ಸಿ.ಎಂ. ವಿರುದ್ದ ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ. ಇ.ಡಿ.‌ ಐ.ಟಿ. ಹಾಗೂ ಸಿಬಿಐ ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿವೆ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.