ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆಯ ಹೊರಾಂಗಣದಲ್ಲಿ ಡ್ರೋನ್ ಕ್ಯಾಮೆರಾ ಬಳಸುವುದನ್ನು ನಿರ್ಬಂಧಿಸಲಾಗಿದೆ.
‘ಅರಮನೆಯು ವಿಶ್ವಖ್ಯಾತಿ ಹೊಂದಿದ್ದು, ಸುತ್ತಮುತ್ತಲಿನ ಪ್ರದೇಶವನ್ನು ‘ಹಳದಿ ವಲಯ’ ಎಂದು ಗುರುತಿಸಲಾಗಿದೆ. ಹೀಗಾಗಿ, ಈ ಪ್ರದೇಶದಲ್ಲಿ ಡ್ರೋನ್ ಕ್ಯಾಮೆರಾ ಬಳಸುವಂತಿಲ್ಲ. ಬಳಕೆಗೆ ಮುನ್ನ ಪೂರ್ವಾನುಮತಿ ಪಡೆಯಬೇಕಾಗುತ್ತದೆ. ಅನುಮತಿ ಪಡೆಯದೇ ಹಾರಾಟ ನಡೆಸಿದಲ್ಲಿ ಅಂಥವರ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುವುದು’ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.