ಮೈಸೂರು: ಕರುನಾಡ ವಿಜಯಸೇನೆ ಆಯೋಜಿಸಿದ್ದ ಹನುಮ ಜಯಂತಿ ಮೆರವಣಿಗೆಯು ನಗರದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು.
ಮಹಾರಾಜ ಕಾಲೇಜು ಮೈದಾನದಲ್ಲಿ ಶಾಸಕ ಎಲ್.ನಾಗೇಂದ್ರ ಮೆರವಣಿಗೆಗೆ ಚಾಲನೆ ನೀಡಿದರು. ರಾಮಸ್ವಾಮಿ ವೃತ್ತ, ಜೋಡಿ ರಸ್ತೆ, ಸಂಸ್ಕೃತ ಪಾಠಶಾಲೆ, ಬಸವೇಶ್ವರ ವೃತ್ತ, ಹಾರ್ಡಿಂಜ್ ವೃತ್ತದ ಮೂಲಕ ಸಾಗಿದ ಮೆರವಣಿಗೆ ಕೋಟೆ ಆಂಜನೇಯ ಸ್ವಾಮಿ ದೇಗುಲ ತಲುಪಿತು.
ನಟ ಧ್ರುವ ಸರ್ಜಾ ಪಾಲ್ಗೊಂಡಿದ್ದರು. ಹನುಮನ ಐದು ವಿಭಿನ್ನ ಮೂರ್ತಿಗಳು, ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಿದವು.
ಕೋಟೆ ಆಂಜನೇಯ ಸ್ವಾಮಿ ದೇಗುಲದ ಮುಂಭಾಗ ಸ್ಥಾಪಿಸಿದ್ದ ಮಂಟಪದಲ್ಲಿ ಹನುಮನ ಮೂರ್ತಿ ಇರಿಸಿ ಪುಷ್ಪಾರ್ಚನೆ ಮಾಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಾರ್ವಜನಿಕರು, ಭಕ್ತಾದಿಗಳಿಗೆ ಲಾಡು, ಮಜ್ಜಿಗೆ, ಪಾನಕ ಹಾಗೂ ಕೋಸಂಬರಿ ವಿತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.