ADVERTISEMENT

ಮುಡಾ ಪ್ರಕರಣ | ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಸುಳ್ಳು ಆರೋಪ; ಪ್ರತಿಭಟನೆ

ದಲಿತ ಮಹಾಸಭಾದ ಮುಖಂಡರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2024, 4:10 IST
Last Updated 8 ನವೆಂಬರ್ 2024, 4:10 IST
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಸುಳ್ಳು ಆರೋಪ ಮಾಡುತ್ತಿದೆ’ ಎಂದು ಆರೋಪಿಸಿ ಗಾಂಧಿನಗರ ದಲಿತ ಮಹಾಸಭಾದ ಮುಖಂಡರು ಪುರಭವನದ ಮುಂಭಾಗ ಗುರುವಾರ ಪ್ರತಿಭಟಿಸಿದರು
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಸುಳ್ಳು ಆರೋಪ ಮಾಡುತ್ತಿದೆ’ ಎಂದು ಆರೋಪಿಸಿ ಗಾಂಧಿನಗರ ದಲಿತ ಮಹಾಸಭಾದ ಮುಖಂಡರು ಪುರಭವನದ ಮುಂಭಾಗ ಗುರುವಾರ ಪ್ರತಿಭಟಿಸಿದರು   

ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಸುಳ್ಳು ಆರೋಪ ಮಾಡುತ್ತಿದೆ’ ಎಂದು ಆರೋಪಿಸಿ ಗಾಂಧಿನಗರ ದಲಿತ ಮಹಾಸಭಾದ ಮುಖಂಡರು ಪುರಭವನದ ಮುಂಭಾಗ ಗುರುವಾರ ಪ್ರತಿಭಟಿಸಿದರು.

ಸಂಘದ ಅಧ್ಯಕ್ಷ ಎಸ್‌. ರಾಜೇಶ್‌ ಮಾತನಾಡಿ, ‘ಮುಡಾ ನಿವೇಶನ ಹಂಚಿಕೆ ಕುರಿತು ಹೈಕೋರ್ಟ್‌ ನಿರ್ದೇಶನದಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಇದರ ಬಗ್ಗೆ ಬಿಜೆಪಿ, ಜೆಡಿಎಸ್‌ ಅಪನಂಬಿಕೆ ವ್ಯಕ್ತಪಡಿಸುವ ಮೂಲಕ ಈ ನೆಲದ ಕಾನೂನು ಹಾಗೂ ಸಂವಿಧಾನದ ಮೇಲೆ ನಂಬಿಕೆ ಇಲ್ಲ ಎಂಬುದನ್ನು ನಿರೂಪಿಸಿದ್ದಾರೆ’ ಎಂದು ಟೀಕಿಸಿದರು.

ಸಾಹುಕಾರ್ ಚೆನ್ನಯ್ಯ ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಎಸ್‌.ಎ.ರಹೀಂ, ರಾಜ್ಯ ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವ, ಕಾರ್ಯದರ್ಶಿ ನಂಜುಂಡಸ್ವಾಮಿ, ಸೇವಾದಳದ ಪ್ರಮುಖರಾದ ಖಮ್ರಾನ್‌ ಪಾಷಾ, ಮೋಹನ್‌ ಕುಮಾರ್‌, ಫಾಜಿಲ್‌, ‍ಪ್ರಮೋದ್‌, ಧನಪಾಲ್, ಕೇಶವ, ಓಂಕಾರ್ ರವಿ, ಬಾಬು, ಸಿದ್ದರಾಜು, ರವಿ ನಾಯಕ, ಸುನಿಲ್‌ ಕುಮಾರ್ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.