ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿರುವುದು ಒಳ್ಳೆಯ ಕೆಲಸ. ಪ್ರಾಧಿಕಾರ ಬೇಕೆಂದು ಬಿಜೆಪಿ ಸರ್ಕಾರವಿದ್ದಾಗಲೂ ಒತ್ತಾಯಿಸಿದ್ದೆವು’ ಎಂದು ಮಾಜಿ ಸಂಸದ ಪ್ರತಾಪಸಿಂಹ ಹೇಳಿದರು.
ಪ್ರಾಧಿಕಾರ ರಚನೆಗೆ ರಾಜವಂಶಸ್ಥರು ವಿರೋಧ ಕುರಿತು ಬುಧವಾರ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಅವರನ್ನು ಸೈದ್ಧಾಂತಿಕವಾಗಿ ವಿರೋಧಿಸುತ್ತೇನೆಯೇ ಹೊರತು ಎಲ್ಲದ್ದರಲ್ಲೂ ಅಲ್ಲ. ಚಾಮುಂಡಿ ಬೆಟ್ಟದಲ್ಲಿ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ಹಾಗೂ ನ್ಯೂನತೆ ಸರಿದೂಗಿಸಲು ಪ್ರಾಧಿಕಾರ ಅವಶ್ಯಕ’ ಎಂದರು.
‘ಬೆಟ್ಟಕ್ಕೆ ಪೋಲಿಸ್ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದಕ್ಕಾಗಿ ಪ್ರಾಧಿಕಾರ ಬೇಕೇ ಬೇಕು. ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರದ ಕ್ರಮ ಸರಿಯಾಗಿದೆ. ಆಸ್ತಿ ಹೊಡೆದಾಟದ ಬಗ್ಗೆ ಮಾತನಾಡುವುದಿಲ್ಲ. ಆದರೆ, ಅಲ್ಲಿರುವ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾದ್ದು ಸರ್ಕಾರದ ಕರ್ತವ್ಯ’ ಎಂದರು.
‘ಅಮೃತ್ ಯೋಜನೆಯಡಿ ಬೆಟ್ಟಕ್ಕೆ ಕುಡಿಯುವ ನೀರು ತಲುಪದಿರಲು ಯಾರು ಕಾರಣ? ನಾನು ಹೇಳಿದರೆ ವಿವಾದ ಆಗಲಿದೆ.ಪ್‌ಲೈನ್ ಹಾಕಲು ಲ್ಲಿ ತಡೆಯಾಗಿದೆ ಎಂದು ಸಂಬಂಧಿಸಿದವರೇ ನೋಡಲಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.