ADVERTISEMENT

ಲೋಕಾಯುಕ್ತ ಅಧಿಕಾರಿಗಳಿಂದ ಮುಡಾ ಹಿಂದಿನ ಆಯುಕ್ತ ನಟೇಶ್ ತೀವ್ರ ವಿಚಾರಣೆ

ಮುಡಾದ ಹಿಂದಿನ ಆಯುಕ್ತ ಡಿ.ಬಿ. ನಟೇಶ್‌ ಮಂಗಳವಾರ ಇಲ್ಲಿನ ಲೋಕಾಯುಕ್ತ ಎಸ್‌.ಪಿ. ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2024, 13:29 IST
Last Updated 19 ನವೆಂಬರ್ 2024, 13:29 IST
ಡಿ.ಬಿ.ನಟೇಶ್‌
ಡಿ.ಬಿ.ನಟೇಶ್‌   

ಮೈಸೂರು: ಮುಡಾದ ಹಿಂದಿನ ಆಯುಕ್ತ ಡಿ.ಬಿ. ನಟೇಶ್‌ ಮಂಗಳವಾರ ಮೈಸೂರು ಲೋಕಾಯುಕ್ತ ಎಸ್‌.ಪಿ. ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಮುಡಾದಿಂದ ವಿಜಯನಗರದಲ್ಲಿ 14 ನಿವೇಶನಗಳನ್ನು ನಿಯಮ ಮೀರಿ ಹಂಚಿಕೆ ಮಾಡಿದ ಆರೋಪ ಅವರ ಮೇಲಿದೆ. ಈ ಸಂಬಂಧ ವಿಚಾರಣೆಗೆ ಬರುವಂತೆ ಪ್ರಕರಣದ ತನಿಖಾಧಿಕಾರಿ ಟಿ.ಜೆ. ಉದೇಶ್‌ ನೋಟಿಸ್‌ ನೀಡಿದ್ದರು.

ಬೆಳಿಗ್ಗೆ 10.30ಕ್ಕೆ ಲೋಕಾಯುಕ್ತ ಕಚೇರಿಗೆ ಬಂದ ಅವರು ಸಂಜೆವರೆಗೂ ವಿಚಾರಣೆ ಎದುರಿಸಿದರು. ಬದಲಿ ನಿವೇಶನಗಳ ಹಂಚಿಕೆಯ ನಿರ್ಣಯ, ವಿಜಯನಗರದಲ್ಲೇ ನಿವೇಶನಗಳನ್ನು ನೀಡಿದ್ದರ ಕುರಿತು ಅಧಿಕಾರಿಗಳ ತಂಡವು ಪ್ರಶ್ನಿಸಿ ಮಾಹಿತಿ ಪಡೆಯಿತು.

ADVERTISEMENT

ಈ ಸಂದರ್ಭ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ ನಟೇಶ್‌ ‘ ನಾವೊಂದು ಕಾಯ್ದೆಯ ಪ್ರಕಾರ ನಿವೇಶನ ಕೊಟ್ಟಿದ್ದು ಸರಿ ಎನ್ನುತ್ತೇವೆ. ಇನ್ನೊಂದು ಕಾಯ್ದೆಯಲ್ಲಿ ಬೇರೆಯವರು ಬೇರೊಂದು ರೀತಿ ಅರ್ಥೈಸುತ್ತಾರೆ. ವಿಚಾರಣೆ ವರದಿ ಬಂದರೆ ಯಾವುದು ಸತ್ಯ ಎಂದು ಗೊತ್ತಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.