ಹುಣಸೂರು: ನಗರದ ಕಲ್ಕುಣಿಕೆ ಹೌಸಿಂಗ್ ಬೋರ್ಡ್ ಬಡಾವಣೆಗೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಘನ ತ್ಯಾಜ್ಯ ವಿಲೇವಾರಿ ಮಾಡಿದ್ದು, ಇದರಿಂದ ದುರ್ವಾಸನೆ ಬರುತ್ತಿದೆ.
ಅಯ್ಯಪ್ಪ ದೇವಸ್ಥಾನಕ್ಕೆ ತೆರಳಲು ಭಕ್ತರು ಈ ಮಾರ್ಗದಲ್ಲೇ ಹಾದು ಹೋಗಬೇಕಿದ್ದು, ನಗರಸಭೆ ಘನತ್ಯಾಜ್ಯ ತೆರವುಗೊಳಿಸಬೇಕು ಮತ್ತು ತ್ಯಾಜ್ಯ ವಿಲೇವಾರಿ ಮಾಡುವ ಸಾರ್ವಜನಿಕರಿಗೆ ದಂಡ ವಿಧಿಸಿ ಹೀಗೆ ಬೇರೆಯವರು ಕಸ ಚೆಲ್ಲದಂತೆ ಎಚ್ಚರಿಕೆ ನೀಡಬೇಕು.
ನಗರ ಸೌಂದರ್ಯ ಕಾಪಾಡಬೇಕಿರುವ ನಗರಸಭೆ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡು ಘನ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಹಕರಿಸಬೇಕು ಮತ್ತು ಜನರಲ್ಲಿ ಜಾಗೃತಿ ಮೂಡಿಸಬೇಕು.
ಉಷಾ, ಕಲ್ಲುಣಿಕೆ ಬಡಾವಣೆ ನಿವಾಸಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.