ಮೈಸೂರು: ‘ಚಾಮರಾಜನಗರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಎಸ್.ಯೋಗೀಶ ಉಪ್ಪಾರ ಒತ್ತಾಯಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಾದ್ಯಂತ ಸುಮಾರು 30 ಲಕ್ಷ ಮತದಾರರಿರುವ ಉಪ್ಪಾರ ಸಮುದಾಯವು ಸಾಮಾಜಿಕವಾಗಿ ತೀರಾ ಹಿಂದುಳಿದಿದೆ. ಸಮಾಜದ ಏಕೈಕ ಶಾಸಕರಾಗಿ ಪುಟ್ಟರಂಗಶೆಟ್ಟಿ ಆಯ್ಕೆಯಾಗಿದ್ದು, ಸೂಕ್ತ ಸ್ಥಾನಮಾನ ನೀಡಬೇಕು’ ಎಂದು ಆಗ್ರಹಿಸಿದರು.
‘ಬಿಜೆಪಿ ಮತ್ತು ಜೆಡಿಎಸ್ ಉಪ್ಪಾರ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯ ನೀಡಲಿಲ್ಲ. ನಾವೆಲ್ಲರೂ ಒಮ್ಮತದಿಂದ ಸಿದ್ದರಾಮಯ್ಯ ಅವರ ನೇತೃತ್ವ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೇವೆ. ಸಮಾಜದ ಮುಂಚೂಣಿ ನಾಯಕರನ್ನು ಗುರುತಿಸಿ ವಿಧಾನ ಪರಿಷತ್ ಸದಸ್ಯ ಸ್ಥಾನ ಹಾಗೂ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಬೇಕು’ ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯಾಧ್ಯಕ್ಷ ಕನಕನಗರ ಮಹದೇವು, ಉಪಾಧ್ಯಕ್ಷ ಕರಳಾಪುರ ನಾಗರಾಜು, ಗೌರವ ಸಲಹೆಗಾರ ಚಂದ್ರಪ್ಪ, ನಿರ್ದೇಶಕರಾದ ಕುಡ್ಲಾಪುರ ಎಂ.ರಾಜು, ಮಲ್ಲೇಶ್, ಮುಖಂಡ ಸೋಮಶಂಕರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.