ಪಿರಿಯಾಪಟ್ಟಣ: ತಾಲ್ಲೂಕಿನ ಬೈಲಕುಪ್ಪೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂನಲ್ಲಿ ಮಂಗಳವಾರ ಹಸಿರು ಹಾವು ಕಾಣಿಸಿಕೊಂಡಿದ್ದು, ಗ್ರಾಹಕರು ಆತಂಕಗೊಂಡರು.
ಹಣ ತೆಗೆಯಲು ಬಂದ ಗ್ರಾಹಕರು ಹಾವು ಕಂಡು ಗಾಬರಿಗೊಂಡರು.
ಆದರೆ ಬ್ಯಾಂಕ್ ಸಿಬ್ಬಂದಿ ಈ ಬಗ್ಗೆ ಕ್ರಮವಹಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಹಕರು ದೂರಿದರು. ಹಾವಿನೊಂದಿಗೆ ಕೆಲ ಗ್ರಾಹಕರು ಚೆಲ್ಲಾಟದಲ್ಲಿ ತೊಡಗಿದ್ದ ದೃಶ್ಯವೂ ಕಂಡುಬಂತು.
ಯುವಕ ಹಾವು ಸೆರೆಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.