ಮೈಸೂರು: ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಆಚರಣೆ ಅಂಗವಾಗಿ ಈಚೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದೊಂದಿಗೆ ಒಡನಾಡಿ ಸಂಸ್ಥೆಯಲ್ಲಿ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.
ವೈದ್ಯಕೀಯ ಕಾಲೇಜಿನ ನಿರ್ದೇಶಕರಾದ ದಾಕ್ಷಾಯಿಣಿ ಮಾತನಾಡಿ, ‘ವೈದ್ಯಕೀಯ ಕ್ಷೇತ್ರದಲ್ಲಿನ ಸೇವೆ ತುಂಬಾ ಪವಿತ್ರವಾದ ಕೆಲಸ. ದೇಶದ ಆರೋಗ್ಯ ಕಾಪಾಡುವ ವೈದ್ಯರು ಸೇವೆಯ ನಿಲುವಿಗೆ ಬದ್ಧರಾಗಿರಬೇಕು. ಮಹಿಳೆಯರು ಹಾಗೂ ಸ್ಥಳೀಯರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
‘ಒಡನಾಡಿ ಸೇವಾ ಸಂಸ್ಥೆಯ ಸ್ಟ್ಯಾನ್ಲಿ ಮಾತನಾಡಿ, ‘ಪ್ರಾಚೀನ ಕಾಲದಿಂದ ಆಧುನಿಕ ಕಾಲದವರೆಗೂ ಸಮಾಜದಲ್ಲಿ ವೈದ್ಯರಿಗೆ ಗೌರವಯುತ ಸ್ಥಾನವಿದೆ. ನಮ್ಮೆಲ್ಲರ ಜೀವ ಕಾಪಾಡುವ ಸೃಷ್ಟಿಕರ್ತ ದೇವರಂತೆ ವೈದ್ಯರು ಕಂಡುಬರುತ್ತಾರೆ’ ಎಂದು ಅಭಿಪ್ರಾಯಿಸಿದರು.
ಮೈಸೂರು ವೈದ್ಯಕೀಯ ಕಾಲೇಜಿನ ಡಾ.ಶ್ವೇತಾ, ಒಡನಾಡಿ ಸಂಸ್ಥೆಯ ಪರಶು, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಡಾ.ಪರಶುರಾಂ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.