ADVERTISEMENT

ಹುಣಸೂರು: ಟಿಎಪಿಸಿಎಂಎಸ್ ಅಧ್ಯಕ್ಷರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 13:57 IST
Last Updated 27 ಫೆಬ್ರುವರಿ 2024, 13:57 IST
ಹುಣಸೂರು ತಾಲ್ಲೂಕಿನ ಉಯಿಗೊಂಡನಹಳ್ಳಿಯಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಬಸವಲಿಂಗಯ್ಯ ಅವರನ್ನು ಗ್ರಾಮಸ್ಥರು ಗೌರವಿಸಿದರು
ಹುಣಸೂರು ತಾಲ್ಲೂಕಿನ ಉಯಿಗೊಂಡನಹಳ್ಳಿಯಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಬಸವಲಿಂಗಯ್ಯ ಅವರನ್ನು ಗ್ರಾಮಸ್ಥರು ಗೌರವಿಸಿದರು   

ಹುಣಸೂರು: ‘ಕ್ಷೇತ್ರದಲ್ಲಿ ಮೂರು ದಶಕಗಳಿಂದ ಜೆಡಿಎಸ್ ಪಕ್ಷದ ಕಾರ್ಯಕರ್ತರಾಗಿ ದುಡಿದ್ದು, ಶಾಸಕ ಹರೀಶ್ ಗೌಡ ಅವರ ಸಹಕಾರದಿಂದ ಟಿಎಪಿಸಿಎಂಎಸ್ ಅಧ್ಯಕ್ಷನಾಗಿದ್ದೇನೆ’ ಎಂದು ಟಿಎಪಿಸಿಎಂಎಸ್ ನೂತನ ಅಧ್ಯಕ್ಷ ಬಸವಲಿಂಗಯ್ಯ ಹೇಳಿದರು.

ತಾಲ್ಲೂಕಿನ ಉಯಿಗೊಂಡನಹಳ್ಳಿಯ ಗ್ರಾಮಸ್ಥರಿಂದ ಗೌರವ ಸ್ವೀಕರಿಸಿ ಮಾತನಾಡಿದರು.

‘ರಾಜಕಾರಣದಲ್ಲಿ ದಶಕಗಳಿಂದ ಗುರುತಿಸಿಕೊಂಡು ಸಾರ್ವಜನಿಕ ಸೇವೆ ಸಲ್ಲಿಸುತ್ತಿದ್ದೇನೆ. ಜೆಡಿಎಸ್ ಮುಖಂಡರಾದ ಜಿ.ಟಿ.ದೇವೇಗೌಡ ಮತ್ತು ಹರೀಶ್ ಗೌಡ ಅವರು ಪ್ರಥಮ ಬಾರಿಗೆ ದಲಿತ ಸಮುದಾಯದವರನ್ನು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗುವ ಅವಕಾಶ ಕಲ್ಪಿಸಿದ್ದಾರೆ’ ಎಂದರು.

ADVERTISEMENT

‘ರಾಜಕೀಯ ಶಕ್ತಿ ಇರುವವರೆಗೂ ಜನರಿಗೆ ಸಹಾಯ ಮಾಡುತ್ತೇನೆ. ಬುದ್ಧ, ಬಸವ, ಅಂಬೇಡ್ಕರ್ ತತ್ವ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದೇನೆ’ ಎಂದು ಹೇಳಿದರು.

ಉಯಿಗೊಂಡನಹಳ್ಳಿ ಗ್ರಾ.ಪಂ ಅಧ್ಯಕ್ಷೆ ಶೋಭಾ ರಮೇಶ್ ಮಾತನಾಡಿದರು. ಸುರೇಶ್, ಕುಮಾರ್, ಮಹೇಶ್, ದೊಡ್ಡಸ್ವಾಮಿಗೌಡ, ಸಣ್ಣಸ್ವಾಮೀಗೌಡ, ಶ್ರೀನಿವಾಸ್, ಪ್ರಕಾಶ್, ಮಹದೇವ್, ಬಲರಾಮ, ಶಿವಣ್ಣೇಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.