ADVERTISEMENT

ಮೈಸೂರು: ಅಕ್ರಮ ಗಣಿಗಾರಿಕೆ ನಿಲ್ಲಿಸಲು ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2021, 8:53 IST
Last Updated 2 ಡಿಸೆಂಬರ್ 2021, 8:53 IST
ಮೈಸೂರಿನಲ್ಲಿ ಪ್ರತಿಭಟನೆ
ಮೈಸೂರಿನಲ್ಲಿ ಪ್ರತಿಭಟನೆ    

ಮೈಸೂರು: ನಂಜನಗೂಡು ತಾಲ್ಲೂಕಿನ ಕಾರ್ಯ, ಚಾಮನಮಾದನಹಳ್ಳಿ ಹಾಗೂ ಕುರಿಹುಂಡಿ ಗ್ರಾಮಗಳ ಬಳಿ ಇರುವ ರೈತರ ಕೃಷಿ ಜಮೀನಿನಲ್ಲಿ ಅವಧಿ ಪೂರ್ಣಗೊಂಡಿದ್ದರೂ ಬಾಕ್ಸೈಟ್ ಗಣಿಗಾರಿಕೆ ನಡೆಸಲಾಗುತ್ತಿದ್ದು, ಕೂಡಲೇ ಇದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಮಹಾನಾಯಕ ರಕ್ಷಣಾ ವೇದಿಕೆ ಹಾಗೂ ಪ್ರಗತಿಪರ ರೈತರ ಸಂಘಟನೆ ನೇತೃತ್ವದಲ್ಲಿ ಸೇರಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸುಮಾರು 150 ಎಕರೆ ಭೂಮಿಯಲ್ಲಿ 500 ಅಡಿಗೂ ಹೆಚ್ಚು ಆಳವಾಗಿ ಗಣಿಗಾರಿಕೆ ನಡೆಸಿ ಖನಿಜಗಳನ್ನು ಲೂಟಿ ಮಾಡಲಾಗಿದೆ. ಇದರಲ್ಲಿ ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿದರು.

ADVERTISEMENT

ಮುಖಂಡರಾದ ಎಂ.ದೇವಣ್ಣ, ಸೋಮಶೇಖರ್, ಸೋಮಣ್ಣ, ನಂಜಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.