ADVERTISEMENT

ಶ್ರೀಕಂಠೇಶ್ವರ ದೇವಾಲಯದಲ್ಲಿ ಭಕ್ತ ಸಾಗರ

ಕಡೆ ಕಾರ್ತಿಕ ಸೋಮವಾರ ವಿಶೇಷ ಪೂಜೆ ಸಲ್ಲಿಸಿದ ಭಕ್ತರು

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2023, 7:11 IST
Last Updated 12 ಡಿಸೆಂಬರ್ 2023, 7:11 IST
ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ಸಾವಿರಾರು ಭಕ್ತರು ಭಾಗವಹಿಸಿ ಸೇವೆ ಸಲ್ಲಿಸಿದರು
ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ಸಾವಿರಾರು ಭಕ್ತರು ಭಾಗವಹಿಸಿ ಸೇವೆ ಸಲ್ಲಿಸಿದರು   

ನಂಜನಗೂಡು: ಇಲ್ಲಿನ ಪುರಾಣ ಪ್ರಸಿದ್ದ ಶ್ರೀಕಂಠೇಶ್ವರ ದೇವಾಲಯಲ್ಲಿ ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು.

ಬೆಳಿಗ್ಗೆ 4 ಗಂಟೆಗೆ ಭಕ್ತರು ಕಪಿಲಾನದಿಯಲ್ಲಿ ತೀರ್ಥ ಸ್ನಾನ ಮಾಡಿ,ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ದೇವಾಲಯದ ಹೊರಗೆ ದೇವರಿಗೆ ಧೂಪ,ದೀಪದ ಸೇವೆ, ತುಲಾಭಾರ , ಉರುಳು ಸೇವೆಗಳನ್ನು ಸಲ್ಲಿಸುವ ಮೂಲಕ ಭಕ್ತರು ಹರಕೆ ಸಲ್ಲಿಸಿದರು.

ದೇವಾಲಯದಲ್ಲಿ ಶ್ರೀಕಂಠೇಶ್ವರಸ್ವಾಮಿಗೆ ಚಿನ್ನದ ಕೊಳಗ ತೊಡಿಸಿ, ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಪಂಚತೀರ್ಥಗಳ ಅಭಿಷೇಕ, ಬಿಲ್ವಾರ್ಚನೆ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಶಾಲ್ಯಾನ್ನ ಅರ್ಪಣೆ ನೆರವೇರಿಸಲಾಯಿತು. ಮಹಾಮಂಗಳಾರತಿ ನಂತರ ಭಕ್ತರಿಗೆ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ದಾಸೋಹ ಭವನದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತರಿಗೆ ವಿಶೇಷ ಸಿಹಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

ADVERTISEMENT

ಪ್ರಸನ್ನ ನಂಜುಂಡೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ: ತಾಲ್ಲೂಕಿನ ಚಿಕ್ಕಯ್ಯನ ಛತ್ರ ಗ್ರಾಮದಲ್ಲಿ ಶ್ರೀ ಪ್ರಸನ್ನ ನಂಜುಂಡೇಶ್ವರಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಸೋಮವಾರದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ದೇವಾಲಯಕ್ಕೆ ಅಕ್ಕಪಕ್ಕದ ಸಾವಿರಾರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ದೇವಾಲಯದಲ್ಲಿ ವಿವಿಧ ಧಾರ್ಮಿಕ ಕೈಕಾಂರ್ಯಗಳನ್ನು ಸಾಂಗೋಪವಾಗಿ ನೆರವೇರಿಸಲಾಯಿತು. ಮುಖ್ಯ ಅರ್ಚಕ ವೆಂಕಟೇಶ್ ನೇತೃತ್ವದಲ್ಲಿ ಶ್ರೀ ಪಾರ್ವತಿ ಸಮೇತ ಪ್ರಸನ್ನ ನಂಜುಂಡೇಶ್ವರ ಸ್ವಾಮಿಯ ಉತ್ಸವವನ್ನು ನೆರವೇರಿಸಲಾಯಿತು.

ದೇವಾಲಯಕ್ಕೆ ಆಗಮಿಸಿದ್ದ ಭಕ್ತರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಸಾವಿರಾರು ಸಂಖ್ಯೆಯ ಭಕ್ತರು ಭೋಜನ ಸ್ವೀಕರಿಸಿದರು.

ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನ ಛತ್ರದ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಶ್ರೀ ಪ್ರಸನ್ನ ನಂಜುಂಡೇಶ್ವರ ಹಾಗೂ ಪಾರ್ವತಮ್ಮ ಅವರ ಉತ್ಸವವನ್ನು ನೆರವೇರಿಸಲಾಯಿತು(ಎಡಚಿತ್ರ) ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ಸಾವಿರಾರು ಭಕ್ತರು ಭಾಗವಹಿಸಿ ಸೇವೆ ಸಲ್ಲಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.