ADVERTISEMENT

ಕನ್ನಡಾಂಬೆ ಸೇವಾರತ್ನ ಪ್ರಶಸ್ತಿ ಪ್ರದಾನ ಇಂದು

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2023, 18:32 IST
Last Updated 28 ನವೆಂಬರ್ 2023, 18:32 IST

ಮೈಸೂರು: ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ನ.29ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ನಗರದ ಕಲಾಮಂದಿರದಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 50ಮಂದಿ ಸಾಧಕರಿಗೆ ‘ಕನ್ನಡಾಂಬೆ ಸೇವಾರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. 

ಸುತ್ತೂರು ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅರ್ಜುನ್ ಅವಧೂತ ಗುರೂಜಿ ಉಪಸ್ಥಿತರಿರುವರು. ಕನ್ನಡಾಂಬೆ ಹಬ್ಬವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸುವರು. ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸಿದರೆ, ಸಾಹಿತಿ ಬನ್ನೂರು ಕೆ.ರಾಜು ಮುಖ್ಯ ಭಾಷಣ ಮಾಡುವರು.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಸಚಿವ ಎಚ್.ಸಿ.ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಹರೀಶ್ ಗೌಡ, ಟಿ.ಎಸ್.ಶ್ರೀವತ್ಸ, ಜಿ.ಡಿ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಎನ್.ಕೆ.ಲೋಕನಾಥ್, ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯಿತಿ ಸಿಇಒ ಗಾಯತ್ರಿ, ಪೊಲೀಸ್ ಆಯುಕ್ತ ರಮೇಶ್ ಬಾನೋತ್‌ ಭಾಗವಹಿಸುವರು ಎಂದು ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಬಿ.ರಾಜಶೇಖರ್ ಪ್ರಕಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.