ADVERTISEMENT

ರಾಜ್ಯಪಾಲರ ಕ್ರಮದ ವಿರುದ್ಧ ತಾಯಿಯಿಂದ ಕಾನೂನು ಹೋರಾಟ: ಯತೀಂದ್ರ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 14:18 IST
Last Updated 19 ಆಗಸ್ಟ್ 2024, 14:18 IST
<div class="paragraphs"><p>ಸಿದ್ದರಾಮಯ್ಯ, ಡಾ. ಯತೀಂದ್ರ ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ, ಡಾ. ಯತೀಂದ್ರ ಸಿದ್ದರಾಮಯ್ಯ

   

ಮೈಸೂರು: ‘ನನ್ನ ತಾಯಿ ಎಂದೂ ಸಾರ್ವಜನಿಕವಾಗಿ ಕಾಣಿಸಿಕೊಂಡವರಲ್ಲ. ಪತಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರ ವಿರುದ್ಧ ಅವರೂ ಕಾನೂನು ಹೋರಾಟ ಮಾಡಲಿದ್ದಾರೆ’ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಈ ಪ್ರಕರಣದಲ್ಲಿ ತಮ್ಮ ಹೆಸರನ್ನು ಅನಗತ್ಯವಾಗಿ ತಂದಿರುವುದರಿಂದ ಅವರಿಗೂ ಬೇಸರವಾಗಿದೆ’ ಎಂದರು.

ADVERTISEMENT

‘ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಅಸಂವಿಧಾನಿಕವಾಗಿದ್ದು, ಮುಖ್ಯಮಂತ್ರಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ವರ್ತಿಸಿದಂತೆ ಮುಂದಿನ ಮುಖ್ಯಮಂತ್ರಿ ವಿರುದ್ಧವೂ ವರ್ತಿಸುವುದಿಲ್ಲ ಎಂಬುದಕ್ಕೆ ಏನು ಗ್ಯಾರಂಟಿ? ಬಿಜೆಪಿ ಅಧಿಕಾರ ದುರುಪಯೋಗಪಡಿಸಿಕೊಂಡು ಏಕಚಕ್ರಾಧಿಪತ್ಯ ಸ್ಥಾಪಿಸಲು ಹೊರಟಿದೆ’ ಎಂದು ಆರೋಪಿಸಿದರು.

‘ಕರ್ನಾಟಕದಲ್ಲಿ ಕಾಂಗ್ರೆಸ್‌ನ ದೊಡ್ಡ ನಾಯಕರಾಗಿರುವ ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಇಳಿಸಿದರೆ ಪಕ್ಷವನ್ನು ದುರ್ಬಲಗೊಳಿಸಬಹುದು. ಮುಂದೆ ಬರುವ ಮುಖ್ಯಮಂತ್ರಿಗಳನ್ನೂ ಬೀಳಿಸಬಹುದು ಎಂಬುದು ಬಿಜೆಪಿಯ ಲೆಕ್ಕಾಚಾರ. ಅವರ ಗುರಿ ಇರುವುದೇ ಬಿಜೆಪಿಯೇತರ ಸರ್ಕಾರಗಳ ಮೇಲೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.