ಮೈಸೂರು: ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಪ್ರಕರಣ ವಾಪಸ್ ಪಡೆದುಕೊಂಡಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡರು.
ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಕೆಲವು ಮೊಕದ್ದಮೆಗಳನ್ನು ವಾಪಸ್ ಪಡೆದುಕೊಳ್ಳಲು ಸರ್ಕಾರಕ್ಕೆ ಅಧಿಕಾರ ಇದೆ. ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಿದ್ದೆವು. ಅವರು ಅವರ ವಿವೇಚನೆ ಬಳಸಿ ವಾಪಸ್ ತೆಗೆದುಕೊಂಡಿದ್ದಾರೆ. ಅದನ್ನು ನಾವು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿದ್ದೇವೆ. ಏನಿದೆ ಎಂಬುದನ್ನು ನೋಡುತ್ತೇನೆ ಎಂದು ಹೇಳಿದರು.
ಸರ್ಕಾರದ ಕ್ರಮ ಖಂಡಿಸಿ ಹುಬ್ಬಳ್ಳಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ಬಿಜೆಪಿಯವರು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ,
ಬಿಜೆಪಿಯವರು ಯಾವಾಗಲೂ ಸುಳ್ಳು ವಿಚಾರಗಳಿಗೇ ಹೋರಾಟ ಮಾಡುತ್ತಾರೆಯೇ ಹೊರತು ಸತ್ಯದ ವಿಚಾರಗಳಿಗೆ ಮಾಡುವುದಿಲ್ಲ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.