ADVERTISEMENT

ಸತ್ಯನ್ ಸೇರಿ ಮೂವರಿಗೆ ಕೆಎಸ್‌ಒಯು ಗೌರವ ಡಾಕ್ಟರೇಟ್

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2024, 7:26 IST
Last Updated 29 ಫೆಬ್ರುವರಿ 2024, 7:26 IST
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ   

ಮೈಸೂರು: ರಾಜ್ಯ ಮಾಹಿತಿ ಆಯುಕ್ತ ಎಚ್.ಸಿ. ಸತ್ಯನ್, ಚಿತ್ರದುರ್ಗದ ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಕೆ.ಎಂ.ವೀರೇಶ್ ಹಾಗೂ ಮಂಡ್ಯದ ಎಸ್.ಜಿ. ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಶರಣಪ್ಪ ವಿ.‌ಹಲಸೆ ತಿಳಿಸಿದರು.

ಮಾರ್ಚ್ 3ರಂದು ಮಧ್ಯಾಹ್ನ 12ಕ್ಕೆ ನಡೆಯುವ 19ನೇ ವಾರ್ಷಿಕ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಲೋಕಾಯುಕ್ತ ನ್ಯಾ‌.ಬಿ.ಎಸ್. ಪಾಟೀಲ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ADVERTISEMENT

ಮೂರು ಪಿಎಚ್‌ಡಿ, 30 ಚಿನ್ನದ ಪದಕಗಳು ಹಾಗೂ 37 ನಗದು ಬಹುಮಾನ ವಿತರಣೆ ಮಾಡಲಾಗುವುದು. 3,398 ಪುರುಷರು ಹಾಗೂ 4,471 ಮಹಿಳೆಯರು ಸೇರಿದಂತೆ ಒಟ್ಟು 7,869 ಅಭ್ಯರ್ಥಿಗಳು ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.