ADVERTISEMENT

ಚಿರತೆ ದಾಳಿ: ಕೃಷಿಕನಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2023, 17:18 IST
Last Updated 11 ಡಿಸೆಂಬರ್ 2023, 17:18 IST
ಪಿರಿಯಾಪಟ್ಟಣ ತಾಲ್ಲೂಕಿನ ಕೆಲ್ಲೂರು ಗ್ರಾಮದ ನಿವಾಸಿ ರಾಜೇಶ್ ಅವರ ಆರೋಗ್ಯವನ್ನು ಆರ್‌ಎಫ್ಒ ಕಿರಣ್ ಕುಮಾರ್ ಸೋಮವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು
ಪಿರಿಯಾಪಟ್ಟಣ ತಾಲ್ಲೂಕಿನ ಕೆಲ್ಲೂರು ಗ್ರಾಮದ ನಿವಾಸಿ ರಾಜೇಶ್ ಅವರ ಆರೋಗ್ಯವನ್ನು ಆರ್‌ಎಫ್ಒ ಕಿರಣ್ ಕುಮಾರ್ ಸೋಮವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು   

ಪಿರಿಯಾಪಟ್ಟಣ: ತಾಲ್ಲೂಕಿನ ಕೆಲ್ಲೂರು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಜಮೀಮನಿನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರೇಗೌಡ ಅವರ ಪುತ್ರ ರಾಜೇಶ್(27) ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ.

ಚಿರತೆ ದಾಳಿ ನಡೆಸಿ ಕಿವಿ ಭಾಗಕ್ಕೆ ಗಾಯ ಮಾಡಿತ್ತು. ಸ್ಥಳೀಯರು ತಕ್ಷಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ವಿಷಯ ತಿಳಿದು ಘಟನ ಸ್ಥಳಕ್ಕೆ ಆರ್‌ಎಫ್ಒ ಕಿರಣ್ ಕುಮಾರ್, ಡಿಆರ್‌ಎಫ್ಒ ಪಾರ್ವತಿ, ಗಾರ್ಡ್ ರಾಜು, ಸತೀಶ್, ಚಾಲಕ ಪುನೀತ್ ಆಗಮಿಸಿ ಸ್ಥಳ ಪರಿಶೀಲಿಸಿ ಸ್ಥಳೀಯರಿಂದ ಮಾಹಿತಿ ಕಲೆ ಹಾಕಿ ಚಿರತೆ ಬಂಧನ ಸಲುವಾಗಿ ಜನರಿಗೆ ಜಾಗೃತಿ ಮೂಡಿಸಿದರು. ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಸ್ಥಳೀಯರು ಕೂಡಲೇ ಚಿರತೆ ಬಂಧಿಸಿ ಗ್ರಾಮಸ್ಥರು ನೆಮ್ಮದಿ ಜೀವನ ನಡೆಸಲು ಸಹಕರಿಸುವಂತೆ ಒತ್ತಾಯಿಸಿದರು.

ADVERTISEMENT

ಸೋಮವಾರ ಬೆಳಿಗ್ಗೆ ಚಿರತೆ ದಾಳಿ ನಡೆಸಿದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿ ಎರಡು ಬೋನು ಇರಿಸಿ ಸ್ಥಳೀಯರು ಆ ಸ್ಥಳದಲ್ಲಿ ಓಡಾಡದಂತೆ ಎಚ್ಚರಿಕೆ ನೀಡಿ ಚಿರತೆ ಬಂಧನಕ್ಕೆ ಕಾರ್ಯಾಚರಣೆ ರೂಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.