ಹುಣಸೂರು: ತಾಲ್ಲೂಕಿನ ಮಾಚಬಾಯನಹಳ್ಳಿಯಲ್ಲಿ ಪರಿಶಿಷ್ಟ ಜಾತಿಯ ಸಮುದಾಯದ ಸ್ಮಶಾನದ ಜಾಗದ ಒತ್ತುವರಿಯನ್ನು ತೆರವುಗೊಳಿಸಲಾಗಿದೆ.
‘ಗ್ರಾಮದಲ್ಲಿ ಸ್ಮಶಾನಕ್ಕೆ ಮಂಜೂರಾಗಿದ್ದ ಒಂದು ಎಕರೆ ಭೂಮಿಯನ್ನು ಸ್ಥಳೀಯರು ಒತ್ತುವರಿ ಮಾಡಿಕೊಂಡಿದ್ದರು. ದಸಂಸ ಎಸ್ಸಿ, ಎಸ್ಟಿ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯ ನಿಂಗರಾಜ್ ಮಲ್ಲಾಡಿ ಮತ್ತು ಗ್ರಾಮಸ್ಥರು ಸಲ್ಲಿಸಿದ ಮನವಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಸರ್ವೆ ನಡೆಸಿ ತೆರವು ಕಾರ್ಯಾಚರಣೆ ನಡೆಸಲಾಗಿದೆ’ ಎಂದು ಗಾವಡಗೆರೆ ಹೋಬಳಿ ಉಪತಹಶೀಲ್ದಾರ್ ಅರುಣ್ ಕುಮಾರ್ ತಿಳಿಸಿದರು.
ದಸಂಸ ಮುಖಂಡ ನಿಂಗರಾಜ್ ಮಲ್ಲಾಡಿ ಮಾತನಾಡಿ, ‘ಎಸ್ಸಿ, ಎಸ್ಟಿ ಜಾಗೃತಿ ಸಮಿತಿ ಸಭೆಯಲ್ಲಿ ಮಾಚಬಾಯನಹಳ್ಳಿ ಗ್ರಾಮದ ಸ್ಮಶಾನ ಭೂಮಿ ಒತ್ತುವರಿ ಸಮಸ್ಯೆ ಕುರಿತು ಚರ್ಚಿಸಲಾಗಿತ್ತು. ತಹಶೀಲ್ದಾರ್ ಸಭೆಯಲ್ಲಿ ನೀಡಿದ ಭರವಸೆಯಂತೆ ಸರ್ವೆ ನಡೆಸಿ ಭೂಮಿ ಒತ್ತುವರಿ ತೆರವುಗೊಳಿಸಿದ್ದಾರೆ’ ಎಂದರು.
ತೆರವು ಕಾರ್ಯಾಚರಣೆಯಲ್ಲಿ ಕಂದಾಯ ನಿರೀಕ್ಷಕ ಹೇಮಂತ್ ಕುಮಾರ್, ಗ್ರಾಮ ಲೆಕ್ಕಿಗ ವಿಜಯ್ ಕುಮಾರ್, ಸಿದ್ದರಾಮು, ಅನಿಲ್ ಕುಮಾರ್, ನಂಜುಂಡಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರಾದ ಪುಟ್ಟಮ್ಮ, ಕುಮಾರಿ, ದಸಂಸ ಮುಖಂಡರಾದ ಹರೀಶ್, ಕೃಷ್ಣಯ್ಯ, ವೆಂಕಟೇಶ್, ಗ್ರಾಮದ ಮುಖಂಡ ಸಣ್ಣಯ್ಯ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.