ADVERTISEMENT

ಮೇಕೆದಾಟು ಯೋಜನೆ ಜಾರಿಗೊಳಿಸಿ: ಮುಖ್ಯಮಂತ್ರಿಗೆ ಹಕ್ಕೊತ್ತಾಯ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 14:36 IST
Last Updated 22 ಅಕ್ಟೋಬರ್ 2024, 14:36 IST
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ‍ಪತ್ರ ಸಲ್ಲಿಸಿದರು
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ‍ಪತ್ರ ಸಲ್ಲಿಸಿದರು   

ಮೈಸೂರು: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ‍ಪತ್ರ ಸಲ್ಲಿಸಿತು.

‘ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಪಕ್ಷ ಪಾದಯಾತ್ರೆ ಮಾಡಿ ಮೇಕೆದಾಟು ಯೋಜನೆ ಪ್ರಾರಂಭಕ್ಕೆ ಒತ್ತಡ ಹಾಕಿತ್ತು. ಆದರೆ, ಅಧಿಕಾರಕ್ಕೆ ಬಂದ ನಂತರ ಮೇಕೆದಾಟು ಯೋಜನೆ ಪ್ರಾರಂಭವಾಗಿಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಯೋಜನೆಯನ್ನು ಶೀಘ್ರ ಆರಂಭಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿಗಾಗಿ ಕೆರೆ ತುಂಬಿಸುವುದು ಹಾಗೂ ಅಂತರ್ಜಲ ವೃದ್ಧಿಗಾಗಿ ಮೇಕೆದಾಟು ಯೋಜನೆ ಜಾರಿಗೊಳಿಸಬೇಕು. ಯೋಜನೆಯ ಮೂಲ ಸ್ಥಳದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ADVERTISEMENT

ರಾಜ್ಯ ಪ್ರಧಾನ ಕಾರ್ಯದರ್ಶಿ ಮಲೆಯೂರು ಹರ್ಷ, ಚಾಮರಾಜನಗರ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ಗೌರವಾಧ್ಯಕ್ಷ ಶಿವರುದ್ರಪ್ಪ, ಮೈಸೂರು ಜಿಲ್ಲಾ ಖಜಾಂಚಿ ಹೊಸಪುರ ಮಾದಪ್ಪ, ಉಪಾಧ್ಯಕ್ಷ ಮಲೆಯೂರು ಪ್ರವೀಣ್, ಅಂಬಳೆ ಮಹದೇವಸ್ವಾಮಿ, ಅರಳಿಕಟ್ಟೆ ಕುಮಾರ್, ವಳಗೆರೆ ಗಣೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.