ADVERTISEMENT

ಚನ್ನಪಟ್ಟಣ ಅಭ್ಯರ್ಥಿ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು: ದಿನೇಶ್

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 15:54 IST
Last Updated 22 ಜೂನ್ 2024, 15:54 IST
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್   

ಮೈಸೂರು: ‘ಚನ್ನಪಟ್ಟಣ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿ ವಿಚಾರದಲ್ಲಿ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ನಾನೇ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿ, ‘ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಿಗೆ ಪಕ್ಷವು ಉಸ್ತುವಾರಿಗಳನ್ನು ನೇಮಿಸಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯ ಸಮಿತಿಯು ಸಭೆ ನಡೆಸಿ ಟಿಕೆಟ್ ಆಕಾಂಕ್ಷಿಗಳ ವಿವರಗಳನ್ನು ಕೆಪಿಸಿಸಿಗೆ ಸಲ್ಲಿಸಲಿದೆ. ನಂತರವಷ್ಟೇ ಅಭ್ಯರ್ಥಿಗಳ ಆಯ್ಕೆ ಆಗಲಿದೆ’ ಎಂದರು.

‘ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂಬ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಹಿಂದೆಯೂ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸದ್ಯ ಅಂತಹ ಆಲೋಚನೆ ಇದ್ದಂತಿಲ್ಲ. ಪಕ್ಷ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.