ಮೈಸೂರು: 'ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಯಾರೆಂಬುದೇ ನನಗೆ ಗೊತ್ತಿಲ್ಲ. ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
‘ಇದರಲ್ಲಿ ನನ್ನ ಪಾತ್ರ ಇಲ್ಲ. ಹೀಗಾಗಿ, ನಾನು ರಾಜೀನಾಮೆ ನೀಡುವುದಿಲ್ಲ' ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
'ಆತ ನಮ್ಮ ಇಲಾಖೆ ಮೇಲೆ ಆರೋಪ ಮಾಡಿದ್ದ. ಈ ವಿಚಾರವಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಯಾಲಯದಿಂದ ಆತನಿಗೆ ನೋಟಿಸ್ ಬಂದಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು' ಎಂದು ಹೇಳಿದರು.
ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಈಚೆಗೆ ಶೇ 40ರಷ್ಟು ಪರ್ಸೆಂಟೇಜ್ ಆರೋಪ ಮಾಡಿ ಸುದ್ದಿಯಾಗಿದ್ದ ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.