ADVERTISEMENT

ಬಿ.ನಾಗೇಂದ್ರಗೆ ಸಚಿವ ಸ್ಥಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2024, 16:20 IST
Last Updated 12 ನವೆಂಬರ್ 2024, 16:20 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಎಚ್.ಡಿ.ಕೋಟೆ (ಮೈಸೂರು ಜಿಲ್ಲೆ): ‘ಶಾಸಕ ಬಿ.ನಾಗೇಂದ್ರ ಅವರನ್ನು ಉಪ‌ಚುನಾವಣೆ ನಂತರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಟ್ಟಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ₹443.64 ಕೋಟಿ ವೆಚ್ಚದಲ್ಲಿ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿ ಅವರು ಮಾತನಾಡಿದರು.

ADVERTISEMENT

‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆಗಿದೆಯೆಂದು ಬಿಜೆಪಿಯವರು ಸುಳ್ಳು ಪ್ರಕರಣವನ್ನು ದಾಖಲಿಸಿದ್ದರು. ನಾಗೇಂದ್ರ ಅವರೂ ಜಾಮೀನು ಪಡೆದು ಹೊರಬಂದಿದ್ದಾರೆ. ಈ ಹಿಂದೆ ಸಚಿವರಾಗಿದ್ದರು. ಉಪ ಚುನಾವಣೆ ಮುಗಿದ ನಂತರ ಸಚಿವ ಸ್ಥಾನ ಕೊಡಬೇಕು, ಕೊಡುವೆ’ ಎಂದರು.

‘ಶಾಸಕ ಸಿ.ಅನಿಲ್ ಕುಮಾರ್ ಅವರಿಗೂ ಸಚಿವ ಸ್ಥಾನ ನೀಡಬೇಕು’ ಎಂಬ ಬೇಡಿಕೆ ವೇದಿಕೆಯಿಂದ ಬಂದಾಗ, ರಾಜನಹಳ್ಳಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರನ್ನು ಉದ್ದೇಶಿಸಿ, ‘ನಾಗೇಂದ್ರ ಅವರಿಗೆ ಕೊಡಬೇಕಾಗಿದೆ. ನಾನು ಮಾತಿಗೆ ತಪ್ಪುವುದಿಲ್ಲ. ಅನಿಲ್ ಅವರಿಗೂ ರಾಜಕೀಯವಾಗಿ ಶಕ್ತಿ ತುಂಬುವ ಕೆಲಸವನ್ನೂ ಮಾಡುತ್ತೇನೆ’ ಎಂದರು.

‘ಪರಿಶಿಷ್ಟ ಜಾತಿ, ಪಂಗಡ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಹಣವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡುವುದಿಲ್ಲ. ಎಲ್ಲ ಜಾತಿಯ ಬಡವರು, ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು. ಈ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.