ADVERTISEMENT

ಮೈಸೂರು: ರಾಷ್ಟ್ರೀಯ ಮೆಗಾ ಲೋಕ್ ಅದಾಲತ್ 13ಕ್ಕೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 13:54 IST
Last Updated 9 ಜುಲೈ 2024, 13:54 IST
   

ಮೈಸೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜು.13ರಂದು ರಾಷ್ಟ್ರೀಯ ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಪರಿಹಾರ ಕಂಡುಕೊಳ್ಳಲು ಇದೊಂದು ಅವಕಾಶವಾಗಿದೆ.

ರಾಜಿಯಾಗಬಲ್ಲ ಅಪರಾಧ, ಬ್ಯಾಂಕ್ ವಸೂಲಾತಿ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮು, ಜಿಲ್ಲಾ ಗ್ರಾಹಕರ ವೇದಿಕೆ ಹಾಗೂ ಕಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ, ಚೆಕ್‌ ಅಮಾನ್ಯ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ, ಕಾರ್ಮಿಕ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕ, ಭೂ ಸ್ವಾಧೀನ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪಿಂಚಣಿ, ಸಾರ್ವಜನಿಕ ಉಪಯುಕ್ತ ಸೇವೆ, ವೈವಾಹಿಕ, ಕುಟುಂಬ ನ್ಯಾಯಾಲಯ, ಸಿವಿಲ್ ಸೇರಿದಂತೆ ಇತರೆ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ.

ADVERTISEMENT

ಉಭಯ ಕಕ್ಷಿದಾರರಿಗೆ ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ತೀರ್ಮಾನ ಆಗುವುದರಿಂದ ಬಾಂಧವ್ಯ ಉಳಿದು ವಿವಾದ ಬಗೆಹರಿಯುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದಿರುವ ಪ್ರಕರಣವೂ ಬಗೆಹರಿಸಿಕೊಳ್ಳಬಹುದು. ಸಂಧಾನದ ಮೂಲಕ ಪ್ರಕರಣ ಇತ್ಯರ್ಥವಾದಲ್ಲಿ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು.

ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದೂ:1800-425-0131 ಹಾಗೂ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ತಾಲ್ಲೂಕು ಕಾನೂನು ಸೇವಾ ಸಮಿತಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.