ADVERTISEMENT

ಮುಡಾ ಪ್ರಕರಣ: ಯಾರನ್ನೂ ರಕ್ಷಿಸೋಲ್ಲ, ತಪ್ಪಿತಸ್ಥರಿಗೆ ಶಿಕ್ಷೆ- ಬೈರತಿ ಸುರೇಶ್‌

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2024, 13:35 IST
Last Updated 8 ಸೆಪ್ಟೆಂಬರ್ 2024, 13:35 IST
<div class="paragraphs"><p>ಬೈರತಿ ಸುರೇಶ್‌</p></div>

ಬೈರತಿ ಸುರೇಶ್‌

   

ಮೈಸೂರು: ‘ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತ‍ಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದರು.

ಇಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಹಗರಣದ ಕುರಿತು ನ್ಯಾ. ದೇಸಾಯಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಸೋಮವಾರ ಹಾಗೂ ಸೆ.12ರಂದು ನ್ಯಾಯಾಲಯದಲ್ಲಿ ವಿಚಾರಣೆ ಇದೆ. ಈಗಾಗಲೇ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಿದ್ದೇವೆ. ನಾವು ಯಾರನ್ನೂ ರಕ್ಷಿಸುವುದಿಲ್ಲ’ ಎಂದರು.

ADVERTISEMENT

‘ವಿರೋಧ ಪಕ್ಷದವರದ್ದು ಟೀಕಿಸುವುದೇ ಕೆಲಸ. ಆ ಬಗ್ಗೆ ನಾನು ಈಗ ಏನನ್ನೂ ಹೇಳುವುದಿಲ್ಲ. ತನಿಖೆ ಮುಗಿದು ವರದಿ ಬರಲಿ. ಯಾರೇ ತಪ್ಪು ಮಾಡಿದರೂ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.

‘ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಅವರನ್ನು ಆ ಸ್ಥಾನದಿಂದ ಬದಲಾವಣೆ ಮಾಡುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.