ಮೈಸೂರು: ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಗುರುವಾರ ಬೆಳಿಗ್ಗೆ 11.30ಕ್ಕೆ ಆರಂಭಗೊಂಡಿತು.
ಮುಡಾ ಪ್ರಭಾರ ಅಧ್ಯಕ್ಷ ಲಕ್ಷ್ಮಿಕಾಂತರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದಿರುವ ಸಭೆಯಲ್ಲಿ ಶಾಸಕರಾದ ಜಿ.ಟಿ. ದೇವೇಗೌಡ, ಕೆ. ಹರೀಶ್ ಗೌಡ, ರಮೇಶ್ ಬಂಡಿಸಿದ್ದೇಗೌಡ, ಟಿ.ಎಸ್. ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಎಚ್. ವಿಶ್ವನಾಥ್, ವಿವೇಕಾನಂದ, ಮುಡಾ ಆಯುಕ್ತ ಕೆ. ರಘುನಂದನ್ ಸೇರಿದಂತೆ ಹಲವರು ಭಾಗಿ ಆಗಿದ್ದಾರೆ.
ಒಟ್ಟು 172 ವಿಷಯಗಳನ್ನು ಸಭೆಯಲ್ಲಿ ಮಂಡಿಸಲಾಗುತ್ತಿದ್ದು, ಇದರಲ್ಲಿ 167 ವಿಷಯಗಳು ಬಡಾವಣೆ ನಕ್ಷೆಗೆ ಸಂಬಂಧಿಸಿದ್ದಾಗಿವೆ.
ಸಭೆಗೂ ಮುನ್ನ ಪತ್ರಕರ್ತರ ಜೊತೆ ಮಾತನಾಡಿದ ಶಾಸಕ ಟಿ.ಎಸ್. ಶ್ರೀವತ್ಸ ' 50:50 ಅನುಪಾತದಲ್ಲಿ ಹಂಚಿಕೆ ಆಗಿರುವ ಎಲ್ಲ ನಿವೇಶನಗಳನ್ನು ರದ್ದು ಮಾಡುವಂತೆ ಇಂದಿನ ಸಾಮಾನ್ಯ ಸಭೆಯಲ್ಲಿ ಒತ್ತಾಯಿಸಲಾಗುವುದು. ಎಲ್ಲ ಪಕ್ಷಗಳ ಶಾಸಕರೂ ಈ ನಿರ್ಣಯ ಬೆಂಬಲಿಸಬೇಕು' ಎಂದು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.