ಮೈಸೂರು: ಒಡಿಶಾದಿಂದ ರೈಲಿನಲ್ಲಿ 85 ಕೆ.ಜಿ 730 ಗ್ರಾಂ ಗಾಂಜಾ ತಂದು ನಗರದಲ್ಲಿ ಮಾರಾಟಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ಸಾತಗಳ್ಳಿಯಲ್ಲಿ ಬೊಲೆರೊ ವಾಹನದಲ್ಲಿ ಗಾಂಜಾ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂತು. ಗಾಂಜಾ ಮೌಲ್ಯ ₹ 40 ಲಕ್ಷವೆಂದು ಅಂದಾಜಿಸಲಾಗಿದ್ದು, ಚಿಲ್ಲರೆ ಮಾರಾಟಕ್ಕೆ ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ವಾಹನ, ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.