ಮೈಸೂರು: ಇಲ್ಲಿನ ವಸಂತನಗರದಲ್ಲಿ 3 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ನಾಟಿವೈದ್ಯ ಶಬ್ಬಾ ಷರೀಫ್ ಹತ್ಯೆಯಾಗಿದ್ದು, ನಾಲ್ವರು ಆರೋಪಿಗಳನ್ನು ಕೇರಳದ ಮಲಪ್ಪುರಂ ಜಿಲ್ಲೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.
‘ವಸಂತನಗರದಲ್ಲಿ ಮೂಲವ್ಯಾಧಿಗೆ ನಾಟಿ ಔಷಧ ನೀಡುತ್ತಿದ್ದ ಷರೀಫ್ ಬಳಿ ಕೇರಳದಿಂದ ಹೆಚ್ಚಿನ ಮಂದಿ ಬಂದು ಔಷಧ ಪಡೆದು ಗುಣಮುಖರಾಗುತ್ತಿದ್ದರು. ಇದು ಅವರಿಗೆ ಕೇರಳದಲ್ಲಿ ಹೆಚ್ಚಿನ ಪ್ರಸಿದ್ಧಿಯನ್ನು ತಂದುಕೊಟ್ಟಿತ್ತು. ಈ ಔಷಧದ ರಹಸ್ಯ ತಿಳಿದು ದುಬೈ ಸೇರಿದಂತೆ ವಿದೇಶದಲ್ಲಿ ಔಷಧ ಮಾರಾಟ ಮಾಡಿ ಹಣ ಸಂಪಾದಿಸುವ ಉದ್ದೇಶದಿಂದ ಇವರ ಕೊಲೆ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳದ ಉದ್ಯಮಿ ಶಬೀನ್ ಅಶ್ರಫ್ ಎಂಬಾತನ ಮನೆಯಲ್ಲಿ ಏ.24 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಷರೀಫ್ ಕೊಲೆ ಕೃತ್ಯ ಬಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.