ಮೈಸೂರು: ಇಲ್ಲಿನ ವಲ್ಲಭಬಾಯಿ ನಗರದ ನಿವಾಸಿ, ಭಾರತೀಯ ವಾಯು ಸೇನೆಯ ಕ್ಯಾಪ್ಟನ್ ಸುಪ್ರಿತಾ ಸಿ.ಟಿ. ಅವರು, ಪ್ರಪಂಚದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿದ್ದಾರೆ. ಅಲ್ಲಿಗೆ ಆಯ್ಕೆಯಾದ ದೇಶದ ಮೊದಲ ಮಹಿಳಾ ಯೋಧೆ ಎಂಬುದು ವಿಶೇಷ. ವಾಯು ಸೇನೆಯ ಅಧಿಕೃತ ವೆಬ್‌ಸೈಟ್ ಇದನ್ನು ಖಚಿತಪಡಿಸಿದೆ.
ತಲಕಾಡು ಪಿಎಸ್‌ಐ ತಿರುಮಲ್ಲೇಶ್ ಹಾಗೂ ನಿರ್ಮಲಾ ದಂಪತಿ ಪುತ್ರಿಯಾದ ಅವರು, ಮೈಸೂರಿನ ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ಎಲ್‌ಎಲ್‌ಬಿ ಪದವಿ ಹಾಗೂ ಎನ್‌ಸಿಸಿ ‘ಸಿ’ ಸರ್ಟಿಫಿಕೇಟ್ ಪಡೆದಿದ್ದರು.
2021ರಲ್ಲಿ ಸೇನಾ ಪಡೆಯಲ್ಲಿ ಲೆಫ್ಟಿನೆಂಟ್ ಆಗಿ ಆಯ್ಕೆಯಾಗಿ ತರಬೇತಿಯ ನಂತರ ವಾಯುಪಡೆಗೆ ನಿಯೋಜನೆಯಾಗಿದ್ದರು. 2024ರಲ್ಲಿ ಪತಿ ಮೇಜರ್ ಜೆರ್ರಿ ಬ್ಲೇಜ್ ಅವರೊಂದಿಗೆ ರಾಜಪತ್ ಪೆರೇಡ್‌ನಲ್ಲಿ ಭಾಗವಹಿಸಿದ್ದರು.
ಅನಂತನಾಗ್, ಜಬ್ಬಾಲ್ಪರ್ ಹಾಗೂ ಲೇಹ್‌ನಲ್ಲಿ ಕರ್ತವ್ಯ ನಿರ್ವಹಿಸಿದ ಬಳಿಕ ಕಠಿಣ ತರಬೇತಿಯಲ್ಲಿ ತೇರ್ಗಡೆಯಾಗಿ ಅವರು ಸಿಯಾಚಿನ್‌ಗೆ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.