ಮೈಸೂರು: ನಂಜನಗೂಡು ಗ್ರಾಮಾಂತರ ಠಾಣೆಯ ಸಿಬ್ಬಂದಿಯೊಬ್ಬರಿಗೆ ಕೋವಿಡ್-19 ದೃಢಪಟ್ಟಿದ್ದು, ಸೋಮವಾರ ಇಡೀ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಐಜಿಪಿ ವಿಪುಲ್ ಕುಮಾರ್, ಎಸ್.ಪಿ.ರಿಷ್ಯಂತ್, ಎಎಸ್ ಪಿ ಸ್ನೇಹಾ ಸೇರಿದಂತೆ 53 ಮಂದಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದ 22 ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದ 33 ಮಂದಿ ಪೊಲೀಸರು ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯನ್ನೂ ಸ್ವಚ್ಛಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.