ಮೈಸೂರು: ಇಲ್ಲಿನ ಮಹಾರಾಣಿ ಕಾಲೇಜಿನ ಪಾರಂಪರಿಕ ಕಟ್ಟಡ ಶುಕ್ರವಾರ ಬೆಳಿಗ್ಗೆ ಕುಸಿದಿದ್ದು, ಭಾರಿ ಅನಾಹುತ ತಪ್ಪಿದೆ.
ಕಟ್ಟಡದ ಕುಸಿದ ಭಾಗವು ರಸಾಯನ ವಿಜ್ಞಾನದ ಪ್ರಯೋಗಾಲಯದ ಕೊಠಡಿಯಾಗಿದ್ದು, ವಿದ್ಯಾರ್ಥಿಗಳು 10.30ರ ವೇಳೆಗೆ ಬರುವರಿದ್ದರು. ಈ ವೇಳೆ ಬಿರುಕು ಮೂಡಿದ್ದನ್ನು ಗಮನಿಸಿದ ವಿಭಾಗದ ಮುಖ್ಯಸ್ಥ ಕೆ.ಕೆ.ಪದ್ಮನಾಭ 10.15ರ ವೇಳೆ ಪ್ರಾಂಶುಪಾಲರ ಗಮನಕ್ಕೆ ತಂದರು.
ಕೊಠಡಿಗೆ ಬಂದ ಪ್ರಾಂಶುಪಾಲ ಡಾ.ಡಿ.ರವಿ ಅವರು ಕೊಠಡಿಗೆ ಬೀಗ ಹಾಕಿಸಿದ್ದಲ್ಲದೆ, ಎಲೆಕ್ಟ್ರಿಕ್ ಸಂಪರ್ಕವನ್ನು ಕಡಿತಗೊಳಿಸಿ ಕಟ್ಟಡದ ಒಳಗೆ ಯಾರೂ ಪ್ರವೇಶಿಸದಂತೆ ಸೂಚಿಸಿದರು.
ಕಟ್ಟಡದ ಮೆಟ್ಟಿಳಿಯುತ್ತಿದ್ದಂತೆಯೇ ಪ್ರಯೋಗಾಲಯದ ಭಾಗವು ಕುಸಿದಿದೆ. ಪ್ರಾಂಶುಪಾಲರು ಹಾಗೂ ವಿಭಾಗದ ಮುಖ್ಯಸ್ಥರಿಂದ ಭಾರಿ ಅನಾಹುತ ತಪ್ಪಿದೆ.
'ಪಾರಂಪರಿಕ ಕಟ್ಟಡದ ದುರಸ್ತಿ ಕಾಮಗಾರಿಯ ಭೂಮಿಪೂಜೆ ಅ.22ರ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಕಳೆದ ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬಿರುಕುಗಳು ಹೆಚ್ಚಾಗಿದ್ದವು' ಎಂದು ಪ್ರಾಂಶುಪಾಲ ಡಾ.ರವಿ ಅವರು 'ಪ್ರಜಾವಾಣಿ'ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.